ಶನಿವಾರ, ಜೂನ್ 19, 2021
23 °C

ದಾವಣಗೆರೆ ಮೇಯರ್ ಆಗಿ ಎಸ್.ಟಿ. ವೀರೇಶ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ದಾವಣಗೆರೆ: ಮಹಾನಗರ ಪಾಲಿಕೆಯ ಮೇಯರ್ ಆಗಿ ಎಸ್.ಟಿ. ವೀರೇಶ್, ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಬುಧವಾರ ಆಯ್ಕೆಯಾಗಿದ್ದಾರೆ.

ಸಾಮಾನ್ಯಕ್ಕೆ ಮೀಸಲಾದ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ 25ನೇ ವಾರ್ಡಿನ ಎಸ್.ಟಿ. ವೀರೇಶ್, ಕಾಂಗ್ರೆಸ್‌ನಿಂದ 38ನೇ ವಾರ್ಡಿನ ಗಡಿಗುಡಾಳ ಮಂಜುನಾಥ ನಾಮಪತ್ರ ಸಲ್ಲಿಸಿದ್ದರು.

ಎಸ್ಸಿ ಮಹಿಳಾ ಮೀಸಲಾದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ 44ನೇ ವಾರ್ಡಿನ  ಶಿಲ್ಪಾ ಜಯಪ್ರಕಾಶ್, ಕಾಂಗ್ರೆಸ್‌ನಿಂದ 36ನೇ ವಾರ್ಡಿನ ನಾಗರತ್ನಮ್ಮ ನಾಮಪತ್ರ ಸಲ್ಲಿಸಿದ್ದರು.

ಬಿಜೆಪಿ ಅಭ್ಯರ್ಥಿಗಳಿಗೆ 29 ಹಾಗೂ ಕಾಂಗ್ರೆಸ್‍ ಅಭ್ಯರ್ಥಿಗಳಿಗೆ 22 ಮತಗಳು ಬಿದ್ದವು. ಏಳು ಮತದಾರರು ಚುನಾವಣೆಗೆ ಗೈರು ಹಾಜರಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು