ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಆಶ್ರಯ ಮನೆ, ಶಿಕ್ಷಣ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುವುದು. ಶೀಘ್ರವೇ ಜನಸಂಪರ್ಕ ಕಚೇರಿ ತೆರೆದು, ಜನಸಂಪರ್ಕ ಸಭೆಯನ್ನು ಕರೆಯಲಾಗುವುದು ಎಂದು ನೂತನ ಶಾಸಕ ಸಮರ್ಥ್ ಶಾಮನೂರು ತಿಳಿಸಿದರು.

‘ಚುನಾವಣೆ ಸಂದರ್ಭದಲ್ಲಿ ಮಾತ್ರವೇ ಪಕ್ಷ ರಾಜಕಾರಣ. ಆ ಬಳಿಕ ಎಲ್ಲರೂ ಒಗ್ಗೂಡಿ ಅಭಿವೃದ್ಧಿಗೆ ಶ್ರಮಿಸಬೇಕು ಎಂಬುದು ನನ್ನ ಧ್ಯೇಯ. ಈ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರವೃತ್ತನಾಗಿದ್ದೇನೆ. ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ಅಭಿವೃದ್ಧಿ ಕೆಲಸದತ್ತ ಗಮನ ಹರಿಸಿದ್ದೇನೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಶಿಕ್ಷಣ ಹಾಗೂ ವೈದ್ಯಕೀಯ ಸೌಲಭ್ಯ ಅತ್ಯುತ್ತಮವಾಗಿವೆ. ಹೊರ ಜಿಲ್ಲೆಯ ಜನರು ಕೂಡ ಶಿಕ್ಷಣ ಹಾಗೂ ಆಸ್ಪತ್ರೆಗಳಿಗೆ ಇಲ್ಲಿಗೆ ಭೇಟಿ ನೀಡುತ್ತಾರೆ. ಈ ಸೌಲಭ್ಯಗಳನ್ನು ಇನ್ನಷ್ಟು ಬಲಪಡಿಸುವ ಕುರಿತು ಆಲೋಚನೆ ಮಾಡಲಾಗಿದೆ. ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರಿಗೆ ಅನುಕೂಲಕರವಾಗುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು’ ಎಂದರು.

‘ಕ್ಷೇತ್ರದಲ್ಲಿ ಆಶ್ರಯ ಮನೆಗಳಿಗೆ ಹೆಚ್ಚು ಬೇಡಿಕೆ ಇದೆ. ಈ ಹಿಂದೆ ಕೂಡ ಹಲವರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಇನ್ನೂ ಹೆಚ್ಚಿನ ಜನರಿಗೆ ಆಶ್ರಯ ಮನೆಗಳನ್ನು ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಸಮಯ ನೀಡಲಾಗುವುದು’ ಎಂದು ನುಡಿದರು.

‘ಶಾಸಕನಾಗಿ ಕಾರ್ಯನಿರ್ವಹಿಸಲು ಇನ್ನೂ ಎರಡು ವರ್ಷಗಳ ಕಾಲಾವಕಾಶವಿದೆ. ಕ್ಷೇತ್ರಕ್ಕೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬಜೆಟ್ನಲ್ಲಿ ₹100 ಕೋಟಿ ಅನುದಾನ ಘೋಷಣೆ ಮಾಡಿದೆ. ವಿಸ್ತೃತ ಅಧ್ಯಯನ ಕೈಗೊಂಡು ಕ್ಷೇತ್ರದ ಮತದಾರರ ಮನೆಬಾಗಿಲಿಗೆ ಅಭಿವೃದ್ಧಿ ತೆಗೆದುಕೊಂಡು ಹೋಗಲಿದ್ದೇನೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಇನ್ನಷ್ಟು ಅಭಿವೃದ್ಧಿ ಪಡಿಸುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಎ.ನಾಗರಾಜ್ ಹಾಜರಿದ್ದರು.

ಮತದಾರರು ‘ಶಾಮನೂರು’ ಕುಟುಂಬದ ಮನೆ ಬಾಗಿಲು ಕಾಯುವ ಕೆಲಸವನ್ನು ಮಾಡಿಲ್ಲ. ಇಂತಹ ಆರೋಪಗಳಲ್ಲಿ ಹುರುಳಿಲ್ಲ. ಮುಂದಿನ ಎರಡು ವರ್ಷಗಳನ್ನು ಮತದಾರರಿಗೆ ಮೀಸಲಿಡುವೆ.
ಸಮರ್ಥ್ ಶಾಮನೂರು, ನೂತನ ಶಾಸಕ ದಕ್ಷಿಣ ವಿಧಾನಸಭಾ ಕ್ಷೇತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.