ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಅವರನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿದೆ. ಸಮರ್ಥಗೆ ಟಿಕೆಟ್ ಘೋಷಣೆ ಮಾಡಿ ಎಐಸಿಸಿ ಭಾನುವಾರ ಪ್ರಕಟಣೆ ಹೊರಡಿಸಿದೆ.

ಗಣಿ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಪುತ್ರ 27 ವರ್ಷದ ಸಮರ್ಥ ಸ್ಪರ್ಧೆಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಹಸಿರು ನಿಶಾನೆ ತೋರಿದೆ. ಈ ಮೂಲಕ ಶಾಮನೂರು ಕುಟುಂಬದ ಮೂರನೇ ತಲೆಮಾರು ಅಧಿಕೃತವಾಗಿ ಚುನಾವಣಾ ರಾಜಕಾರಣಕ್ಕೆ ಪದಾರ್ಪಣೆ ಮಾಡಿದಂತಾಗಿದೆ.

ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಮಾರ್ಚ್ 15 ರಂದು ಚುನಾವಣೆ ಘೋಷಣೆ ಆಗಿದೆ. ಕ್ಷೇತ್ರದಲ್ಲಿ ನಿರ್ಣಾಯಕ ಮತದಾರರನ್ನು ಹೊಂದಿರುವ ಮುಸ್ಲಿಂ ಸಮುದಾಯ ಕಾಂಗ್ರೆಸ್ ಟಿಕೆಟ್ಗೆ ಬಿಗಿಪಟ್ಟು ಹಿಡಿದಿದ್ದರಿಂದ ಅಭ್ಯರ್ಥಿ ಘೋಷಣೆ ಕಗ್ಗಂಟಾಗಿ ಪರಿಣಮಿಸಿತ್ತು.

ಮಧ್ಯಪ್ರವೇಶ ಮಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಂಗಳೂರಿನಲ್ಲಿ ಸರಣಿ ಸಭೆ ನಡೆಸಿದ್ದರು. ಮುಸ್ಲಿಂ ಅಭ್ಯರ್ಥಿಗೆ ಅವಕಾಶ ನೀಡುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಒತ್ತಾಯಿಸಿದ್ದರು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಅನೇಕರು ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರನ ಪರವಾಗಿ ನಿಂತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಶನಿವಾರ ಸಭೆ ನಡೆಸಿ ಸಮರ್ಥ ಹೆಸರು ಅಂತಿಮಗೊಳಿಸಲಾಗಿತ್ತು.

ಟಿಕೆಟ್ ಘೋಷಣೆಗೂ ಮುನ್ನವೇ ಸಮರ್ಥ ಶಾಮನೂರು ಅವರು ತಾಯಿ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರೊಂದಿಗೆ ಶುಕ್ರವಾರವೇ ನಾಮಪತ್ರ ಸಲ್ಲಿಸಿದ್ದರು. ‘ಬಿ’ ಫಾರಂ ಇಲ್ಲದೇ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದು ಕುತೂಹಲ ಕೆರಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.