ಹೊನ್ನನಾಯಕನಹಳ್ಳಿ (ಚನ್ನಗಿರಿ): ‘ಕೇವಲ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದಲ್ಲಿ ಶಾಲೆಯ ಅಭಿವೃದ್ಧಿ ಸಾಧ್ಯವಿಲ್ಲ. ದಾನಿಗಳ ಸಹಾಯ ಕೂಡಾ ಶಾಲೆಯ ಅಭಿವೃದ್ಧಿಗೆ ಸಹಕಾರಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಜಯಪ್ಪ ಹೇಳಿದರು.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಟೇಬಲ್, ಕುರ್ಚಿ ದೇಣಿಗೆ ನೀಡಿದ ಟಿ.ಎಸ್.ಸುವರ್ಣ ಅವರನ್ನು ಸನ್ಮಾನಿಸಿ ಮಾತನಾಡಿದರು.

‘ಇದೇ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಸುವರ್ಣ ಅವರು ಜೂನ್ 30ರಂದು ನಿವೃತ್ತಿ ಹೊಂದಿದ್ದು, ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ ನೆನಪಿಗಾಗಿ ನಲಿ–ಕಲಿ ಕೊಠಡಿಗೆ ಅಗತ್ಯವಾದ ಟೇಬಲ್ ಹಾಗೂ ಕುರ್ಚಿಗಳನ್ನು ದೇಣಿಗೆ ನೀಡಿರುವುದು ಸ್ವಾಗತಾರ್ಹ’ ಎಂದರು.

ಹೆಬ್ಬಳಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಚಿ.ಕೆಂಚಪ್ಪ, ಮಣ್ಣಮ್ಮ ಪ್ರೌಢಶಾಲೆ ಮುಖ್ಯಶಿಕ್ಷಕ ಪಿ.ವಿ. ಸ್ವಾಮಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್. ಗಣೇಶ್, ಎಸ್ಡಿಎಂಸಿ ಅಧ್ಯಕ್ಷ ಮಹೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.