ನ್ಯಾಮತಿ: ಸಂತ ಸೇವಾಲಾಲ್ ರವರ 282ನೇ ಜಯಂತಿ ಉತ್ಸವವನ್ನು ಈ ಬಾರಿ ಕೋವಿಡ್ ಕಾರಣದಿಂದ ಫೆ. 13ರಿಂದ 15ರವರೆಗೆ ಸೂರಗೊಂಡನ ಕೊಪ್ಪದಲ್ಲಿ ಭಾಯಾಗಡ್ನಲ್ಲಿ ಸರಳವಾಗಿ ಆಚರಿಸಲಾಗುತ್ತಿದ್ದು, ಆಯಾ ಇಲಾಖೆ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮನ್ವಯದೊಂದಿಗೆ ಅಚ್ಚುಕಟ್ಟಾಗಿ ನಿರ್ವಹಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಕುಡಚಿ ಶಾಸಕ ಪಿ. ರಾಜೀವ್ ಸೂಚಿಸಿದರು.

ಸೂರಗೊಂಡನಕೊಪ್ಪದ ಸಂತ ಸೇವಾಲಾಲ್ ಕ್ಷೇತ್ರದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಸಂತ ಸೇವಾಲಾಲ್ ಕ್ಷೇತ್ರಾಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಡೆಯುವ ಈ ಜಯಂತಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬರಲಿದ್ದು, ಇದಕ್ಕಾಗಿ ಅಗತ್ಯ ಹೆಲಿಪ್ಯಾಡ್ ನಿರ್ಮಾಣವಾಗಬೇಕು. ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿ ಕಾರ್ಯ ಆಗಬೇಕು. ನಾಡಿನ ಹಲವು ಭಾಗಗಳಿಂದ ಕ್ಷೇತ್ರಕ್ಕೆ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದ್ದು, ಉತ್ಸವ ದಿನಗಳಂದು ಹೊನ್ನಾಳಿ, ಹರಿಹರ, ಶಿವಮೊಗ್ಗ, ಶಿಕಾರಿಪುರ, ದಾವಣಗೆರೆ, ಸವಳಂಗ, ಮುಂತಾದ ಕಡೆಗಳಿಂದ ಕೆಎಸ್ಆರ್ಟಿಸಿಯವರು ವಿಶೇಷ ಬಸ್ ವ್ಯವಸ್ಥೆ ಮಾಡಬೇಕು’ ಎಂದರು

‘ಜಾತ್ರೆಯ ಅವಧಿಯಲ್ಲಿ ವಿದ್ಯುತ್ ಸ್ಥಗಿತಗೊಳಿಸದಂತೆ ಬೆಸ್ಕಾಂ ಕ್ರಮ ವಹಿಸಬೇಕು. ಹೆಚ್ಚಿನ ಜನ ಸೇರುವುದರಿಂದ ಪರಿಸರ ಸ್ವಚ್ಛತೆ ಕಾಯ್ದುಕೊಳ್ಳಲು ನಿರ್ಮಿತಿ ಕೇಂದ್ರದಿಂದ ತಾತ್ಕಾಲಿಕ ಶೌಚಾಲಯ, ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು. ಕ್ಷೇತ್ರದಲ್ಲಿ ಸ್ವಚ್ಛತೆಗಾಗಿಯೇ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು. ವಾಹನಗಳ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳ ಗುರುತಿಸಿ ಸಿದ್ಧಪಡಿಸಬೇಕು. ಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ಟ್ಯಾಂಕರ್ಗಳನ್ನು ಒದಗಿಸಬೇಕು’ ಎಂದು ರಾಜೀವ್ ತಿಳಿಸಿದರು.

‘ಕ್ಷೇತ್ರಕ್ಕೆ ವಿವಿಧ ಭಾಗಗಳಿಂದ ಬರುವ ಮಾಲಾಧಾರಿಗಳಿಗೆ ದಾವಣಗೆರೆ, ಶಿಕಾರಿಪುರ, ಸವಳಂಗ ಸೇರಿ ಅಗತ್ಯವಿರುವ ಕಡೆ ವಿಶ್ರಾಂತಿ ತಾಣ ನಿರ್ಮಿಸಿ, ಅಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು. ಮಾಲಾಧಾರಿಗಳಿಗೆ ವಿತರಿಸುವ ಸಲುವಾಗಿ ಕೆಎಂಎಫ್ ನಿಂದ 15 ಸಾವಿರ ಮಜ್ಜಿಗೆ ಪಾಕೆಟ್ ಖರೀದಿಸಲು ನಿರ್ಧರಿಸಲಾಗಿದೆ. ಮೂರು ದಿವಸ ಕ್ಷೇತ್ರದಲ್ಲಿ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ’ ಎಂದರು.

ಸಂತ ಸೇವಾಲಾಲ್ ಮಹಾಮಠ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಂದ್ರನಾಯ್ಕ, ತಾಲ್ಲೂಕು ಪಂಚಾಯಿತಿ ಸದಸ್ಯ ಪೀರ್ಯ ನಾಯ್ಕ, ತಾಂಡಾ ಅಭಿವೃದ್ಧಿ ನಿಗಮದ ನಿರ್ದೇಶಕಿ ಸುನಿತಾ ಬಾಯಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ನ್ಯಾಮತಿ ತಹಶೀಲ್ದಾರ್ ತನುಜಾ ಟಿ.ಸವದತ್ತಿ, ಹೊನ್ನಾಳಿ ತಹಶೀಲ್ದಾರ್ ಬಸನಗೌಡರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.