ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನದ ಪ್ರಮಾಣ ಹೆಚ್ಚಿಸಿ, ಕಾಂಗ್ರೆಸ್ ಗೆಲ್ಲಿಸಿ: ಪ್ರಭಾ ಮಲ್ಲಿಕಾರ್ಜುನ್

ಸಂತೇಬೆನ್ನೂರು: ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ
Published 3 ಮೇ 2024, 5:24 IST
Last Updated 3 ಮೇ 2024, 5:24 IST
ಅಕ್ಷರ ಗಾತ್ರ

ಸಂತೇಬೆನ್ನೂರು: ಮತದಾನದ ದಿನದಂದ ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾಂಗ್ರೆಸ್ ಗೆಲ್ಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.

ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಪುಷ್ಕರಣಿಯವರೆಗೆ ಗುರುವಾರ ರೋಡ್ ಶೋ ನಡೆಸಿ ಅವರು ಮಾತನಾಡಿದರು. 

'ಕಾಂಗ್ರೆಸ್ ಪರ ಜನರ ಒಲವು ಹಾಗೂ ಉತ್ಸಾಹ ವಿಶ್ವಾಸ ಹೆಚ್ಚಿಸಿದೆ. ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಸೇವೆಗೆ ಅವಕಾಶ ಮಾಡಿಕೊಡಿ. ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಸೌಲಭ್ಯಗಳನ್ನು ಹೆಚ್ಚಿಸಲು ಪ್ರಯತ್ನಿಸುತ್ತೇನೆ. ನೀರಿನ ಸಮಸ್ಯೆಗೆ ಯೋಜನೆ ರೂಪಿಸಿ ಕಾರ್ಯಗತ ಮಾಡಲು ಅವಕಾಶ ನೀಡಿ’ ಎಂದರು.

ಶಾಸಕ ಬಸವರಾಜು ವಿ.ಶಿವಗಂಗಾ, ಮಾಜಿ ಶಾಸಕ ವಡ್ನಾಳ್ ರಾಜಣ್ಣ, ಜಿ.ಎಸ್. ಲಿಂಗರಾಜು, ಗ್ರಾ.ಪಂ.ಅಧ್ಯಕ್ಷೆ ಭಾಗ್ಯ ವಿಜಯ್ ಗುಜ್ಜರ್, ಉಪಾಧ್ಯಕ್ಷೆ ಶೃತಿ ರುದ್ರೇಶ್ ಪಾಡಿಗೆರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT