ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕನ್ನಡ ಕ್ರಿಯಾ ಸಮಿತಿಯಿಂದ ನೀಡುವ ‘ಕರ್ನಾಟಕ ಚೂಡಾಮಣಿ’ ಪ್ರಶಸ್ತಿಗೆ ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿದ್ದು, ಡಿ.22ರಂದು ಕುವೆಂಪು ಕನ್ನಡ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಪ್ರದಾನ ಮಾಡುವರು ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ವ.ಚ. ಚನ್ನೇಗೌಡ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪಾಂಡೊಮಟ್ಟಿ–ಕಮ್ಮತ್ತಹಳ್ಳಿಯ ವಿರಕ್ತಮಠದ ಗುರು ಬಸವಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಈ ಸಮಾರಂಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಎಚ್.ಎಸ್. ಮಂಜುನಾಥ ಕುರ್ಕಿ ಅಭಿನಂದನಾ ನುಡಿಗಳನ್ನಾಡುವರು. ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಕೆ.ಜಿ. ಶಿವಕುಮಾರ್, ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್.ಹೆಬ್ಬಾಳ್ ಪಾಲ್ಗೊಳ್ಳುವರು. ಅಂದು ಬೆಳಿಗ್ಗೆ ಶಿವಪಾರ್ವತಿ ಕಲ್ಯಾಣ ಮಂಟಪದಿಂದ ಕುವೆಂಪು ಕನ್ನಡ ಭವನದವರೆಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ’ ಎಂದು’ ಮಾಹಿತಿ ನೀಡಿದರು.

‘ಸಮಿತಿಯು ನಾಡು–ನುಡಿಯ ಏಳಿಗೆಗಾಗಿ ಹೋರಾಟ ನಡೆಸುತ್ತಿರುವವರಿಗೆ 2007ರಿಂದ ಡಾ.ಪಾಟೀಲ ಪುಟ್ಟಪ್ಪ, ಡಾ.ಎಂ. ಚಿದಾನಂದಮೂರ್ತಿ, ವಾಟಾಳ್ ನಾಗರಾಜ್ ಸೇರಿ ಈವರೆಗೆ 12 ಮಂದಿಗೆ ಈ ಪ್ರಶಸ್ತಿ ನೀಡಲಾಗಿದೆ’ ಎಂದು ಹೇಳಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ್ ಕುರ್ಕಿ, ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಪ್ರಭುಸ್ವಾಮಿ, ರಾಜ್ಯ ಖಜಾಂಚಿ ಕೆ.ಎಸ್.ಎಂ. ಹುಸೇನ್, ಕೆ.ಜಿ.ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.