ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12ರಿಂದ ಶರಣ ಸಂಸ್ಕೃತಿ ಉತ್ಸವ; ಶೂನ್ಯ ಪೀಠ ಪ್ರಶಸ್ತಿ ಪ್ರದಾನ

Last Updated 7 ಜುಲೈ 2022, 4:33 IST
ಅಕ್ಷರ ಗಾತ್ರ

ದಾವಣಗೆರೆ: ಜಯದೇವ ಜಗದ್ಗುರುಗಳ 65ನೇ ಸ್ಮರಣೋತ್ಸವದ ಅಂಗವಾಗಿ ಇಲ್ಲಿನ ಬಸವಕೇಂದ್ರದಿಂದ ಜುಲೈ 12ರಿಂದ 14ವರೆಗೆ ಶರಣ ಸಂಸ್ಕೃತಿ ಉತ್ಸವ, ಶ್ರೀ ಮುರುಘೇಂದ್ರ ಶಿವಯೋಗಿಗಳ ಲಿಂಗೈಕ್ಯ ಶತಮಾನೋತ್ಸವ, ‘ಜಯದೇವಶ್ರೀ’ ಶೂನ್ಯಪೀಠ ಪ್ರಶಸ್ತಿ ಪ್ರದಾನ ಸಮಾರಂಭ, ಡಾ.ಶಿವಮೂರ್ತಿ ಮುರುಘಾ ಶರಣರ ಶೂನ್ಯಪೀಠಾರೋಹಣದ ತೃತೀಯ ದಶಮಾನೋತ್ಸವ ಹಾಗೂ ಡಿ.ಲಿಟ್ ಕೃತಿ ಲೋಕಾರ್ಪಣೆ ಕಾರ್ಯಕ್ರಮಗಳು ನಡೆಯಲಿವೆ.

‘ಶಿವಯೋಗ ಆಶ್ರಮದ ಜಯದೇವ ಸಾಂಸ್ಕೃತಿಕ ಭವನದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಜುಲೈ 12ರಂದು ಸಂಜೆ 6.30ಕ್ಕೆ ನಡೆಯುವ ಸಾಧಕರ ಸಮಾವೇಶದ ಸಾನ್ನಿಧ್ಯವನ್ನು ಇಳಕಲ್‌ನ ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆ ವಹಿಸುವರು’ ಎಂದು ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಸಾಧಕರ ಸಮಾವೇಶದಲ್ಲಿ ಮಾಜಿ ಸಚಿವ ಎಸ್. ಮಲ್ಲಿಕಾರ್ಜುನ್, ಹರಿಹರ ಶಾಸಕ ಎಸ್‌. ರಾಮಪ್ಪ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಸೈಯ್ಯದ್ ಸೈಫುಲ್ಲಾ, ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಬಿ.ವೀರಣ್ಣ ಪಾಲ್ಗೊಳ್ಳುವರು’ ಎಂದು ಹೇಳಿದರು.

‘ಜುಲೈ 13ರಂದು ಸಂಜೆ 6.30ಕ್ಕೆ ನಡೆಯುವ ಶ್ರೀ ಮುರುಘೇಂದ್ರ ಶಿವಯೋಗಿಗಳ ಲಿಂಗೈಕ್ಯ ಶತಮಾನೋತ್ಸವದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು ರಚಿಸಿರುವ ‘ದಿವ್ಯಪಥ ಲೋಕಹಿತ’ ಗ್ರಂಥವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡುವರು. ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ಅಥಣಿಯ ಗಚ್ಚಿನಮಠದ ಶಿವಬಸವ ಗುರುಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್‌.ಎ. ರವೀಂದ್ರನಾಥ್ ಪಾಲ್ಗೊಳ್ಳುವರು’ ಎಂದು ಮಾಹಿತಿ
ನೀಡಿದರು.

‘ಜುಲೈ 14ರಂದು ಬೆಳಿಗ್ಗೆ 7.30ಕ್ಕೆ ಡಾ.ಶಿವಮೂರ್ತಿ ಮುರುಘಾ ಶರಣರು ಸಹಜ ಶಿವಯೋಗ ಕಾರ್ಯಕ್ರಮ ನಡೆಸಿಕೊಡಲಿದ್ದು, ಹೆಬ್ಬಾಳು ಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ, ವಚನಶ್ರೀ ಮಠದ ಡಾ. ಬಸವಕುಮಾರ ಸ್ವಾಮೀಜಿ, ಮಾಚಿದೇವ ಸಂಸ್ಥಾನಮಠದ ಬಸವ ಮಾಚಿದೇವ ಸ್ವಾಮೀಜಿ, ಜನವಾಡ ಅಲ್ಲಮಪ್ರಭು ಆಶ್ರಮದ ಮ‌ಲ್ಲಿಕಾರ್ಜುನ ಸ್ವಾಮೀಜಿ, ಹಾವೇರಿ ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ, ಸಿದ್ಧರಳ್ಳಿ ಪಾರಮಾರ್ಥ ಗವಿಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬೆಳಿಗ್ಗೆ 10.30ಕ್ಕೆ ಅಕ್ಕಮಹಾದೇವಿ ನೇತ್ರದಾನ ಪ್ರೇರಣಾ ಸಮಿತಿ ಹಾಗೂ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಸಹಯೋಹದಲ್ಲಿ ನೇತ್ರ ಉಚಿತ ಪರೀಕ್ಷೆ ಹಾಗೂ ಚಿಕಿತ್ಸೆ ಶಿಬಿರ ನಡೆಯಲಿದೆ’ ಎಂದರು.

‘ಜುಲೈ 14ರಂದು ಸಂಜೆ 6.30ಕ್ಕೆ ಡಾ.ಶಿವಮೂರ್ತಿ ಮುರುಘಾ ಶರಣರ ಪೀಠಾರೋಹಣದ ತೃತೀಯ ದಶಮಾನೋತ್ಸವ ನಡೆಯಲಿದ್ದು, ಮುರುಘಾ ಶರಣರ ‘ವಚನ ಸಂಸ್ಕೃತಿಯ ಸಮುದಾಯ ತತ್ವ ಮತ್ತು ಸಮಕಾಲೀನ ಸಂದರ್ಭ’ಡಿ.ಲಿಟ್ ಕೃತಿಯನ್ನು ಸಾಹಿತಿ ಡಾ.ದೊಡ್ಡರಂಗೇಗೌಡ ಲೋಕಾರ್ಪಣೆಗೊಳಿಸುವರು. ಸಿದ್ಧರಾಮೇಶ್ವರ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಸಂಸ್ಥಾನ ಮಠದ ಶಾಂತವೀರ ಸ್ವಾಮೀಜಿ ಪಾಲ್ಗೊಳ್ಳುವರು. ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಪಾಲ್ಗೊಳ್ಳುವರು. ವಿಮರ್ಶಕ ಡಾ.ಬೈರಮಂಗಲ ರಾಮೇಗೌಡ ಅಭಿನಂದನಾ ನುಡಿಗಳನ್ನಾಡು
ವರು. ‘ವೀರಕಪುತ್ರ ಶ್ರೀನಿವಾಸ್’ ಪುಸ್ತಕ ಕುರಿತು ಮಾತನಾಡುವರು’ ಎಂದು ಹೇಳಿದರು.

‘ಉತ್ಸವದ ಅಂಗವಾಗಿ ಜುಲೈ 7ರಿಂದ 11ರವರೆಗೆ ಜನವಾಡದ ಮಲ್ಲಿಕಾರ್ಜುನ ಸ್ವಾಮೀಜಿಗಳಿಂದ ಪ್ರವಚನ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

ಎಂ. ಜಯಕುಮಾರ್, ಎಸ್‌. ಓಂಕಾರಪ್ಪ, ಹಾಸಭಾವಿ ಕರಿಬಸಪ್ಪ, ಕಣಕುಪ್ಪಿ ಮುರುಗೇಶಪ್ಪ, ಲಂಬಿ ಮುರುಗೇಶ್, ನಸೀರ್ ಅಹ್ಮದ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT