ಸಾಸ್ವೆಹಳ್ಳಿ: ಗ್ರಾಮದಲ್ಲಿ ಕಬ್ಬಿನ ಹಾಲು ಸೇವಿಸಿದ ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡಿದ್ದ ಘಟನೆಯ ಬಳಿಕ ಆರೋಗ್ಯ ಅಧಿಕಾರಿಗಳ ತಂಡವು ವಿವಿಧ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿತು.

ಈ ತಪಾಸಣೆಯ ವೇಳೆ ಬಹಳಷ್ಟು ಬಹುತೇಕ ಕಬ್ಬಿನ ಹಾಲಿನ ಅಂಗಡಿ, ಹೋಟೆಲ್ ಮತ್ತು ಬೀದಿಬದಿ ಆಹಾರ ಮಳಿಗೆಗಳ ಮಾಲೀಕರು ಪರವಾನಗಿ ಪಡೆಯದೇ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.

ನಿಯಮ ಉಲ್ಲಂಘಿಸಿದ ಎಲ್ಲ ಅಂಗಡಿಗಳಿಗೂ ನೋಟಿಸ್ ನೀಡುವಂತೆ ಜಿಲ್ಲಾ ಅಂಕಿತ ಅಧಿಕಾರಿ ನಾಗರಾಜ್ ಜೆ.ಎಸ್. ಅವರು ಸ್ಥಳೀಯ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

‘14 ದಿನಗಳ ಒಳಗಾಗಿ ಆಹಾರ ಸುರಕ್ಷತಾ ಇಲಾಖೆಗೆ ಸ್ಥಳೀಯ ವೈದ್ಯಾಧಿಕಾರಿ ಮೂಲಕ ಅರ್ಜಿ ಸಲ್ಲಿಸಿ ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು. ಅವರಿಗೆ ಆಹಾರ ಸುರಕ್ಷತೆಯ ಬಗ್ಗೆ ತರಬೇತಿ ನೀಡಲಾಗುವುದು. ನಿಯಮ ಪಾಲನೆಯಾಗದಿದ್ದರೆ ಕ್ರಮ ಜರುಗಿಸಲಾಗುವುದು’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಮಾದರಿ ರವಾನೆ: ಕಬ್ಬಿನ ಹಾಲಿನ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಯಿತು. ಸಾಸ್ವೆಹಳ್ಳಿಯ ಓವರ್ಹೆಡ್ ಟ್ಯಾಂಕ್ನ ನೀರನ್ನು ಪರೀಕ್ಷೆಗಾಗಿ ಜಿಲ್ಲಾ ಸರ್ವೇಕ್ಷಣ ಘಟಕಕ್ಕೆ ರವಾನಿಸಲಾಯಿತು.

ಹೊನ್ನಾಳಿ ಆಹಾರ ಸುರಕ್ಷತಾ ಅಧಿಕಾರಿ ನವೀನ್ ಕುಮಾರ್, ಸಾಸ್ವೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಂಜುನಾಥ್ ಹಾಗೂ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ನಾಗರಾಜಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-43-1352664631

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.