ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಕ್ರಮ ಮರಳು ಸಾಗಾಟ: 2 ಲಾರಿ ವಶಕ್ಕೆ

Published : 9 ಆಗಸ್ಟ್ 2024, 16:26 IST
Last Updated : 9 ಆಗಸ್ಟ್ 2024, 16:26 IST
ಫಾಲೋ ಮಾಡಿ
Comments

ಸಾಸ್ವೆಹಳ್ಳಿ: ಸಮೀಪದ ಲಿಂಗಾಪುರದ ಬಳಿ ಶುಕ್ರವಾರ ಮುಂಜಾನೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ವಶಪಡಿಸಿಕೊಂಡು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಒಪ್ಪಿಸಿರುವುದಾಗಿ ಹೊನ್ನಾಳಿ ಠಾಣೆಯ ಪಿಐ ಸುನಿಲ್ ಕುಮಾರ್ ತಿಳಿಸಿದ್ದಾರೆ.

ತುಂಗಭದ್ರಾ ನದಿ ಪಾತ್ರದಲ್ಲಿ ಸಂಗ್ರಹಿಸಿಟ್ಟು ನಂತರ ಸಾಗಿಸುತ್ತಿರುವುದಾಗಿ ಲಾರಿ ಚಾಲಕರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಗೆ ₹35,000 ದಂಡ ವಿಧಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ರಶ್ಮಿ ತಿಳಿಸಿದ್ದಾರೆ.

ಪೊಲೀಸ್ ತಂಡದಲ್ಲಿ ಸಾಸ್ವೆಹಳ್ಳಿ ಎಎಸ್‌ಐ ಹರೀಶ್, ಪೊಲೀಸ್ ಕಾನ್‌ಸ್ಟೆಬಲ್ ಪ್ರಸನ್ನ ಕುಮಾರ್, ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT