ದಾವಣಗೆರೆ: ಕೋಮು ಸಾಮರಸ್ಯ ಹದಗೆಡಿಸುವ ನಿಟ್ಟಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಸಂಚಾಲಕ ಸತೀಶ್ ಪೂಜಾರಿ ಅವರನ್ನು ಪೊಲೀಸರು ಶನಿವಾರ ತಡರಾತ್ರಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಂಧಿಸಿದ್ದಾರೆ.
ದಾವಣಗೆರೆಯ ಬಸವನಗರ ಠಾಣೆ ಪೊಲೀಸರು ಪೂಜಾರಿ ಅವರನ್ನು ತಡರಾತ್ರಿ ನಗರಕ್ಕೆ ಕರೆತಂದು ನ್ಯಾಯಾಧೀಶರೆದುರು ಹಾಜರುಪಡಿಸಿದರು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಜಿಲ್ಲಾ ಕಾರಾಗೃಹಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗಮಂಗಲ ಗಲಭೆ ಖಂಡಿಸಿ ಸೆ.18ರಂದು ನಗರದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಸತೀಶ್ ಪೂಜಾರಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಮರುದಿನ ನಡೆದ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು.