ದಾವಣಗೆರೆ: ಕನ್ನಡ ಭಾಷೆಗೆ ಇತಿಹಾಸ ಹಾಗೂ ಪರಂಪರೆ ಇದೆ. ನಟ ಕಮಲ್ ಹಾಸನ್ ಹೇಳಿಕೆಯಿಂದ ಕನ್ನಡದ ಘನತೆಗೆ ಧಕ್ಕೆ ಆಗುವುದಿಲ್ಲ. ಅವರ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.

‘ಕಮಲ್ ಹಾಸನ್ ಆಡಿದ ಮಾತಿನಿಂದ ಕನ್ನಡಕ್ಕೆ ತೊಂದರೆ ಆಗುವುದಿಲ್ಲ. ಈ ಬಗ್ಗೆ ಚರ್ಚೆ ಮಾಡುತ್ತ ಕಮಲ್ ಅವರನ್ನು ಎತ್ತರಕ್ಕೆ ಏರಿಸುವುದು ಸರಿಯಲ್ಲ’ ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ರೈತರು, ದಲಿತ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದು ಹೊಸದೇನಲ್ಲ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಎಲ್ಲ ಪಕ್ಷಗಳು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ನಿದರ್ಶನಗಳಿವೆ. ಪ್ರಕರಣ ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿರುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಹಿಂದಿನ ಸರ್ಕಾರದ ಅವಧಿಯಲ್ಲಿಯೂ ಮಂಗಳೂರಿನಲ್ಲಿ ಕೋಮುಗಲಭೆಗಳು ನಡೆದಿವೆ. ಕೋಮುಗಲಭೆ ನಿಯಂತ್ರಣಕ್ಕೆ ಸರ್ಕಾರ ಒತ್ತು ನೀಡಲಿದೆ. ಸಚಿವ ಸಂಪುಟ ಪುನರ್ ರಚನೆ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ಗೆ ಬಿಟ್ಟ ವಿಚಾರ. ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಸ್ವಾಭಾವಿಕ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.