ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೇಬೆನ್ನೂರು: 10 ಸಾವಿರ ಶಿಕ್ಷಕರಿಗೆ ಸ್ಕೌಟ್ಸ್, ಗೈಡ್ಸ್ ತರಬೇತಿ

Published 10 ಜನವರಿ 2024, 6:36 IST
Last Updated 10 ಜನವರಿ 2024, 6:36 IST
ಅಕ್ಷರ ಗಾತ್ರ

ಸಂತೇಬೆನ್ನೂರು: ‘ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 10 ಸಾವಿರ ಶಿಕ್ಷಕರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ನೀಡಲಾಗಿದೆ. ತಾಲ್ಲೂಕಿನ ಶಿಬಿರದಲ್ಲಿ 100 ಶಿಕ್ಷಕರು ತರಬೇತಿ ಪಡೆದಿರುವುದು ದಾಖಲೆಯಾಗಿದೆ’ ಎಂದು ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.

ಇಲ್ಲಿಗೆ ಸಮೀಪದ ಕಾಕನೂರಿನ ವಿಶ್ವಗುರು ಸಮುದಾಯ ಭವನದಲ್ಲಿ ಭಾನುವಾರ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಹಮ್ಮಿಕೊಳ‍್ಳಲಾಗಿದ್ದ ತರಬೇತಿ ಶಿಬಿರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪ್ರಾಮಾಣಿಕತೆ, ದೇಶಪ್ರೇಮ, ಸಮಾಜಸೇವೆ, ಪ್ರಾಣಿ ರಕ್ಷಣೆ, ಪರಿಸರ ಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲು ಪ್ರೇರಣೆ ನೀಡುವುದು ಸಂಸ್ಥೆಯ ಗುರಿ. ಜಯಣ್ಣ ಚಿಗಟೇರಿ, ಕೊಂಡಜ್ಜಿ ಬಸಪ್ಪನವರ ಕುಟುಂಬದವರು ದಾವಣಗೆರೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಾಪಿಸಿ ರಾಜ್ಯಕ್ಕೆ ಮಾದರಿ ಆಗಿದ್ದಾರೆ’ ಎಂದರು.

ಬಿ.ಇ.ಒ. ಜಯಪ್ಪ ಮಾತನಾಡಿ, ‘ತಾಲ್ಲೂಕಿನ ಶಾಲೆಗಳಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್ ಘಟಕ ಸ್ಥಾಪಿಸಿ ಮಕ್ಕಳಲ್ಲಿ ಶಿಸ್ತು ಬೆಳೆಸಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

ಜಿಲ್ಲಾ ಮುಖ್ಯ ಆಯುಕ್ತ ಮುರುಘ ರಾಜೇಂದ್ರ ಚಿಗಟೇರಿ, ಷಡಕ್ಷರಪ್ಪ, ಶಾರದ ಮಾಗಾನಹಳ್ಳಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರುಮೂರ್ತಿ, ಸಹ ಕಾರ್ಯದರ್ಶಿ ಮಲ್ಲಿಕಾರ್ಜುನ ಗೌಡ, ವಿಶ್ವನಾಥ್, ದೇವೇಂದ್ರಪ್ಪ, ಬಿ.ಆರ್‌.ಸಿ. ಶಂಕರಪ್ಪ, ಕೆ.ಪಿ.ಮಹೇಶ್, ಷಣ್ಮುಖಪ್ಪ, ಕಬ್ಬೂರು ಮಹೇಶ್ವರಪ್ಪ, ರತ್ನಮ್ಮ, ಓಂಕಾರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT