ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿ

ಸರ್ಕಾರಿ ನೌಕರರ ಬೀಳ್ಕೊಡುಗೆ, ಪದಗ್ರಹಣದಲ್ಲಿ ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ
Last Updated 19 ಜುಲೈ 2019, 8:56 IST
ಅಕ್ಷರ ಗಾತ್ರ

ದಾವಣಗೆರೆ: ಸರ್ಕಾರಿ ನೌಕರರು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿದಾಗ ಅವರು ನಿಮ್ಮನ್ನು ಸ್ಮರಿಸಿಕೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿ ಜಿ.ಎನ್‌. ಶಿವಮೂರ್ತಿ ಹೇಳಿದರು.

ಇಲ್ಲಿನ ಸರ್ಕಾರಿ ನೌಕರರ ಸಮುದಾಯಭವನದಲ್ಲಿ ಗುರುವಾರ ನಡೆದ ಸರ್ಕಾರಿ ನೌಕರರ ಸಂಘದ 2013–19ನೇ ಸಾಲಿನ ಪದಾಧಿಕಾರಿಗಳಿಗೆ ಬೀಳ್ಕೊಡುಗೆ ಮತ್ತು 2019–24ನೇ ಸಾಲಿನ ಪದಾಧಿಕಾರಿಗಳಿಗೆ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರದ್ಧೆಯಿಂದ ಪ್ರಾಮಾಣಿಕವಾಗಿ ಸರ್ಕಾರಿ ನೌಕರರು ಕರ್ತವ್ಯ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌, ‘ಸಾರ್ವಜನಿಕ ಕರ್ತವ್ಯದಲ್ಲಿ ಇರುವವರು ಒತ್ತಡದ ಬದುಕಿನಲ್ಲಿ ಕೆಲಸ ಮಾಡಬೇಕಾಗುತ್ತದೆ. ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಪ್ರಭಾರ ಅಧ್ಯಕ್ಷ ಸಿ. ಪರಶುರಾಮಪ್ಪ, ರಾಜ್ಯ ಪರಿಷತ್ತಿನ ಸದಸ್ಯ ಬಿ.ಆರ್‌. ತಿಪ್ಪೇಸ್ವಾಮಿ, ಕೋಶಾಧಿಕಾರಿ ಬಿ. ಮಂಜುನಾಥ್‌ ಮತ್ತು ಪದಾಧಿಕಾರಿಗಳನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ನೂತನ ಅಧ್ಯಕ್ಷರಾದ ಬಿ. ಫಾಲಾಕ್ಷಿ, ರಾಜ್ಯ ಪರಿಷತ್‌ ಸದಸ್ ಎನ್‌. ಮಾರುತಿ, ಕೋಶಾಧಿಕಾರಿ ಆರ್‌. ರವಿ, ಕಾರ್ಯದರ್ಶಿ ಬಿ. ಶಿವಣ್ಣ ಮತ್ತು ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಲಾಯಿತು.

ಜಿಲ್ಲಾ ಪಂಚಾಯಿತಿ ಸಿಇಒ ಎಚ್‌. ಬಸವರಾಜೇಂದ್ರ, ಭೀಮನಾಯ್ಕ್, ಕೃಷ್ಣಮೂರ್ತಿ, ರೇಣುಕಾಮೂರ್ತಿ, ಬಸಣ್ಣ ಸಂಗಣ್ಣ ಮಾದರ್‌, ವಿಜಯಮಹಾಂತೇಶ್‌, ಎಚ್‌.ಸಿ. ಅಜ್ಜಯ್ಯ ಅವರೂ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT