ದಾವಣಗೆರೆ: ಜಾತಿ, ಧರ್ಮಗಳ ನಡುವೆ ಕಂದಕ ಸೃಷ್ಟಿಸುವ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕಿಂತ (ಆರ್ಎಸ್ಎಸ್) ಬಾಂಧವ್ಯ ಬೆಸೆಯುವ ಕಾಂಗ್ರೆಸ್ನ ಸೇವಾದಳದ ಅಗತ್ಯವಿದೆ ಎಂದು ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ಧೂಡಾ) ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಧ್ವಜಾ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

‘ಹಲವು ಜಾತಿ, ಧರ್ಮಗಳಿರುವ ದೇಶ ಭಾರತ. ಪ್ರತಿಯೊಬ್ಬರು ಸಾಮರಸ್ಯದಿಂದ ಜೀವನ ಸಾಗಿಸುತ್ತಿದ್ದಾರೆ. ಇಂತಹ ದೇಶದಲ್ಲಿ ಸಾಮರಸ್ಯ ಕಾಪಾಡುವ ಬದಲು ಸಮಾಜದಲ್ಲಿ ಕಂದಕ ಸೃಷ್ಟಿಸುವ ಕೆಲಸವನ್ನು ಆರ್ಎಸ್ಎಸ್ ಮಾಡುತ್ತಿದೆ’ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಡಿ.ಶಿವಕುಮಾರ್, ರಾಜ್ಯ ಉಪಾಧ್ಯಕ್ಷೆ ಉಮಾ ತೋಟಪ್ಪ, ರಾಜ್ಯ ಕಾರ್ಯದರ್ಶಿ ಪ್ರವೀಣ್, ದಾವಣಗೆರೆ ಉತ್ತರ ವಲಯ ಅಧ್ಯಕ್ಷ ಆವರಗೆರೆ ಚಂದ್ರಪ್ಪ, ಹರಿಹರ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.