ಮಲೇಬೆನ್ನೂರು: ಸಮೀಪದ ಕೊಮಾರನಹಳ್ಳಿ ಗ್ರಾಮದ ನಾಗರಾಜಯ್ಯ ಅವರ ಕೊಟ್ಟಿಗೆಯಲ್ಲಿದ್ದ 4 ಹಸುಗಳು ಮಂಗಳವಾರ ರಾತ್ರಿ ಸಿಡಿಲು ಬಡಿದು ಸಾವಿಗೀಡಾಗಿವೆ.

‘ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುಗಳು ಸಿಡಿಲ ಹೊಡೆತಕ್ಕೆ ಸಿಲುಕಿ ಕೂಗಿಕೊಂಡವು. ಘಟನೆ ನಡೆಯುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಡಿತವಾಯಿತು. ಬೆಂಕಿ ಕಾಣಿಸಿಕೊಂಡಿತು. ಮಳೆಯ ನಡುವೆಯೇ ಕೊಟ್ಟಿಗೆಯೊಳಗೆ ನೋಡಿದಾಗ 4 ಹಸುಗಳು ಸತ್ತು ಬಿದ್ದಿದ್ದವು’ ಎಂದು ಮಾಲೀಕ ನಾಗರಾಜಯ್ಯ ಅಲವತ್ತುಕೊಂಡರು.

ಜನರ ಸಹಕಾರದಿಂದ ಬೆಂಕಿ ನಂದಿಸಲಾಯಿತು ಎಂದು ಮಾಹಿತಿ ನೀಡಿದರು. 4 ಹಸುಗಳ ಮೌಲ್ಯ ₹ 3 ಲಕ್ಷ ಎಂದು ಅಂದಾಜು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಉಪತಹಶೀಲ್ದಾರ್ ಆರ್. ರವಿ, ಕಂದಾಯ ನಿರೀಕ್ಷಕ ಆನಂದ್, ಗ್ರಾಮ ಆಡಳಿತಾಧಿಕಾರಿ ಅಣ್ಣಪ್ಪ, ಪಶು ವೈದ್ಯಾಧಿಕಾರಿ ಬಾಲಚಂದ್ರ ತೇಲಗಾರ್, ಪೊಲೀಸರು ಭೇಟಿ ನೀಡಿದ್ದರು.

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.