ಚನ್ನಗಿರಿ: ತಾಲ್ಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ 1 ಕೆ.ಜಿ. ಅಕ್ಕಿಯನ್ನು ಕಡಿಮೆ ನೀಡುತ್ತಿದ್ದಾರೆ ಎಂಬ ದೂರಿನ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಇದುವರೆಗೆ 5 ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ಅಮಾನತು ಮಾಡಿದ್ದಾರೆ.
ಕ್ಷೇತ್ರದ ಕೆಂಪನಹಳ್ಳಿ, ನೀತಿಗೆರೆ, ಹಿರೇಉಡ, ಮಾವಿನಹೊಳೆ ಹಾಗೂ ಹಿರೇಮಳಲಿ ಗ್ರಾಮದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ ಪ್ರತಿ ಕಾರ್ಡ್‌ಗೆ 1 ಕೆ.ಜಿ. ಅಕ್ಕಿಯನ್ನು ಕಡಿಮೆ ಕೊಡುತ್ತಿದ್ದಾರೆ ಎಂಬ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 5 ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ಅಮಾನತು ಮಾಡಿ, ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಸ್ತುಗಳನ್ನು ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಪ್ರತಿ ದಿನ ಕೂಡಾ ದೂರು ಬಂದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ನ್ಯಾಯಬೆಲೆ ಅಂಗಡಿಗಳಲ್ಲಿ ಕಡಿಮೆ ಪಡಿತರವನ್ನು ನೀಡಿದರೆ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಆಹಾರ ಇಲಾಖೆ ನಿರೀಕ್ಷಕ ಜಯರಾಂ ನಾಯ್ಕ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.