ಶನಿವಾರ, ನವೆಂಬರ್ 28, 2020
26 °C

ಬಾಲಕಿಗೆ ಲೈಂಗಿಕ ದೌರ್ಜನ್ಯ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾಳಿ: ತಾಲ್ಲೂಕಿನ ಗ್ರಾಮವೊಂದರ ಬಾಲಕಿಯನ್ನು ಅಪಹರಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕ ಹಾಗೂ ಸಹಕರಿಸಿದ ಇಬ್ಬರನ್ನು ಬಂಧಿಸಿದ್ದಾರೆ.

ಹಾಲೇಶ್ (25) ಬಂಧಿತ. ಇವರಿಗೆ ಸಹಕರಿಸಿದ ಚನ್ನಗಿರಿ ತಾಲ್ಲೂಕಿನ ಹರೋಸಾಗರದ ಹಾಲೇಶಪ್ಪ (68) ಹಾಗೂ ಕುಂದೂರು ಗ್ರಾಮದ ರುದ್ರೇಶ್ (24) ಬಂಧಿತರು.

‘ಹಾಲೇಶ್ ಮದುವೆಯಾಗುವುದಾಗಿ ನಂಬಿಸಿ 15 ವರ್ಷದ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿದ್ದು, ಈತನ ಕೃತ್ಯಕ್ಕೆ ಹಾಲೇಶಪ್ಪ ಹಾಗೂ ಹನುಮಂತಪ್ಪ ಸಹಕರಿಸಿದ್ದರು. ರುದ್ರೇಶ್ ಹಾಲೇಶ್‌ನ ಸ್ನೇಹಿತನಾಗಿದ್ದು, ಬಾಲಕಿಯನ್ನು ಕರೆದೊಯ್ಯಲು ಸಹಾಯ ಮಾಡಿದ್ದು, ಆತನನ್ನು ಬಂಧಿಸಲಾಗಿದೆ. ಹನುಮಂತಪ್ಪ ಪರಾರಿಯಾಗಿದ್ದು, ಆತನ ಪತ್ತೆಗೆ ತಂಡ ರಚಿಸಲಾಗಿದೆ’ ಎಂದು ಸಿಪಿಐ ಟಿ.ವಿ. ದೇವರಾಜ್ ತಿಳಿಸಿದ್ದಾರೆ.  

ಪೋಕ್ಸೊ ಕಾಯ್ದೆಯಡಿ ಹಾಲೇಶ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಪಿಎಸ್‍ಐ ತಿಪ್ಪೇಸ್ವಾಮಿ, ಹೆಡ್ ಕಾನ್ಸ್‌ಟೆಬಲ್‌ಗಳಾದ ಪೈರೋಜ್, ಜಗದೀಶ್ ಹಾಗೂ ಶೀಲಾ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು