ಹೊದಿಗೆರೆ (ಚನ್ನಗಿರಿ): ‘ಹಿಂದೂ ಸಾಮ್ರಾಜ್ಯ ಹಾಗೂ ಧರ್ಮದ ಸಂಸ್ಥಾಪಕ ಶಿವಾಜಿ ಮಹಾರಾಜರ ತಂದೆ ಷಹಾಜೀ ರಾಜೇ ಭೋಂಸ್ಲೆ ಅವರ ಸಮಾಧಿ ಸ್ಥಳ ಆಳುವ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಇದುವರೆಗೂ ಅಭಿವೃದ್ಧಿ ಕಂಡಿಲ್ಲ’ ಎಂದು ಶ್ರೀರಾಮ ಸೇನೆ ರಾಜ್ಯ ಘಟಕದ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿರುವ ಷಹಾಜೀ ರಾಜೇ ಭೋಂಸ್ಲೆ ಸಮಾಧಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದರು.

‘ಪುರಾತತ್ವ ಇಲಾಖೆ ಸ್ಮಾರಕಗಳ ಅಭಿವೃದ್ಧಿಗೆ ಮುಂದೆ ಬರುವುದಿಲ್ಲ. ಈ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾದರೆ ಅಡ್ಡಿ ಪಡಿಸುತ್ತದೆ. ಇಲ್ಲಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ₹ 5 ಕೋಟಿ ಅನುದಾನವನ್ನು ಸಚಿವ ಸತೀಶ್ ಜಾರಕಿಹೊಳಿ ಬಿಡುಗಡೆ ಮಾಡಿದರೂ ಅನೇಕ ಕಾರಣಗಳನ್ನು ಮುಂದಿಟ್ಟು ಇಲಾಖೆ ಅಡ್ಡಗಾಲು ಹಾಕುತ್ತಿದೆ’ ಎಂದು ದೂರಿದರು.

‘ಪುರಾತತ್ವ ಇಲಾಖೆಯ ನೀತಿಯಿಂದಾಗಿ ರಾಜ್ಯದಲ್ಲಿ ಅನೇಕ ಸ್ಮಾರಕಗಳು ಪಾಳು ಬೀಳುವಂತಾಗಿವೆ. ಸಂಸದರು ಈ ಸ್ಥಳದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕಾರ್ಯ ಮಾಡಬೇಕು. ಹಿಂದೂ ಧರ್ಮದ ಪ್ರಮುಖ ಸ್ಮಾರಕಗಳ ಅಭಿವೃದ್ಧಿಗೆ ಕೇಂದ್ರ ಪುರಾತತ್ವ ಇಲಾಖೆ ಅಡ್ಡಪಡಿಸಬಾರದು. ನಾವೆಲ್ಲಾ ಒಂದಾಗಿ ಐತಿಹಾಸಿಕ ಸ್ಮಾರಕಗಳ ಉಳಿವಿಗಾಗಿ ಹೋರಾಟ ಮಾಡಬೇಕಾಗಿದೆ’ ಎಂದರು.

ಕ್ಷತ್ರಿಯ ಮರಾಠ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ. ಶಿವಾಜಿರಾವ್ ಶಿಂಧೆ, ವಿಎಚ್ಪಿ ಮುಖಂಡರಾದ ಎನ್. ರವಿಚಂದ್ರ, ಮಂಜುನಾಥ್ ಕಾಳೆ, ಮಂಜುನಾಥ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-43-692345774

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.