ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಮನೂರುಗೆ ಗೌರವ ಡಾಕ್ಟರೇಟ್ ಪ್ರದಾನ

Last Updated 12 ಸೆಪ್ಟೆಂಬರ್ 2021, 3:54 IST
ಅಕ್ಷರ ಗಾತ್ರ

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ಶಾಸಕ, ಶಾಮನೂರು ಶಿವಶಂಕರಪ್ಪ ಅವರಿಗೆ ಕಲಬುರ್ಗಿ ಶರಣಬಸವ ವಿಶ್ವವಿದ್ಯಾಲಯವು ಶುಕ್ರವಾರ ಗೌರವ ಡಾಕ್ಟರೇಟ್‍ ನೀಡಿ ಗೌರವಿಸಿತು.

ಶಾಮನೂರು ಶಿವಶಂಕರಪ್ಪನವರ ಶಿಕ್ಷಣ, ಸಮಾಜ ಸೇವೆಯನ್ನು ಗುರುತಿಸಿ ವಿಶ್ವವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಘಟೀಕೋತ್ಸವದಲ್ಲಿ ಕುಲಾಧಿಪತಿ ಶರಣಬಸವಪ್ಪ ಅಪ್ಪಾ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಸುಪ್ರೀಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಶಿವರಾಜ್ ಪಾಟೀಲ್, ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ, ವಿಧಾನ ಪರಿಷತ್ ಸದಸ್ಯ
ಬಿ.ಜಿ. ಪಾಟೀಲ, ರಾಜಶೇಖರ ಶಿವಾಚಾರ್ಯ, ಉದ್ಯಮಿ ಲಿಂಗರಾಜ ಎಸ್. ಪಾಟೀಲ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು.

ದಾಕ್ಷಾಯಿಣಿ ಶರಣಬಸವಪ್ಪ ಅಪ್ಪಾ, ಕೇಂದ್ರ ಸಚಿವ ಭಗವಂತ ಖೂಬಾ, ದಾವಣಗೆರೆ
ವಿಶ್ವವಿದ್ಯಾಲಯದ ಕುಲಪತಿ ಡಾ. ಶರಣಪ್ಪ ವಿ.ಹಲಸೆ, ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ
ಡಾ. ದಯಾನಂದ
ಅರಸರ, ಸಂಸದ ಉಮೇಶ್ ಜಾಧವ್, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ನಿರಂಜನ್ ವಿ. ನಿಷ್ಟಿ ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT