ಶನಿವಾರ, ಏಪ್ರಿಲ್ 1, 2023
29 °C

ಗೋಪೂಜೆ ಸರ್ಕಾರಿ ಕಾರ್ಯಕ್ರಮ ಅಗತ್ಯವಿರಲಿಲ್ಲ: ಶಾಮನೂರು ಶಿವಶಂಕರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿ, ‘ಭಾರತ ಕೃಷಿಕರ ನಾಡು. ಈ ದೇಶದಲ್ಲಿ ಬಲಿಪಾಡ್ಯಮಿ ಸೇರಿ ವಿವಿಧ ಹಬ್ಬಗಳಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ. ನಾವೂ ಇಂದಿಗೂ ಗೋವುಗಳಿಗೆ ಪೂಜೆ ಸಲ್ಲಿಸುತ್ತಿದ್ದು, ಸರ್ಕಾರ ಇದೊಂದು ಸರ್ಕಾರಿ ಕಾರ್ಯಕ್ರಮವಾಗಿ ಏಕೆ ರೂಪಿಸಿದೆ ಎಂದು ತಿಳಿದಿಲ್ಲ. ಸಂಪ್ರದಾಯದಂತೆ ನಾವು ಪೂಜೆ ಸಲ್ಲಿಸುತ್ತೇವೆ’ ಎಂದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.