ದಾವಣಗೆರೆ: ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ಅನಿವಾರ್ಯತೆ ಎದುರಾಗಿದ್ದು, ಕ್ಷೇತ್ರದಲ್ಲಿ ಪ್ರಬಲ ಎದುರಾಳಿಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ರಾಜಕೀಯ ಲೆಕ್ಕಾಚಾರಗಳು ಮೊಳಕೆಯೊಡೆದಿವೆ.

95 ವರ್ಷದ ಶಾಮನೂರು ಶಿವಶಂಕರಪ್ಪ ಡಿ.14ರಂದು ಅಗಲಿದ್ದಾರೆ. ಡಿ.15ರಂದು ಅಂತ್ಯಕ್ರಿಯೆ ನಡೆದಿದ್ದು, ಶಾಮನೂರು ಕುಟುಂಬ ಶೋಕದಲ್ಲಿದೆ. ಇತ್ತ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಪಚುನಾವಣೆ ಕುರಿತು ಪಿಸುಮಾತು ಶುರುವಾಗಿದೆ.

2008ರಲ್ಲಿ ನಡೆದ ಕ್ಷೇತ್ರ ಪುನರ್ ವಿಂಗಡಣೆಯ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂದಿದೆ. ಕ್ಷೇತ್ರಕ್ಕೆ ಈವರೆಗೆ ನಡೆದ 4 ಚುನಾವಣೆಗಳಲ್ಲಿ ಶಾಮನೂರು ಶಿವಶಂಕರಪ್ಪ ಅವರೇ ಆಯ್ಕೆಯಾಗಿದ್ದಾರೆ. ಇದಕ್ಕೂ ಮುನ್ನ ದಾವಣಗೆರೆ ವಿಧಾನಸಭಾ ಕ್ಷೇತ್ರವನ್ನು ಎರಡು ಬಾರಿ ಹಾಗೂ ಲೋಕಸಭಾ ಕ್ಷೇತ್ರವನ್ನು ಒಮ್ಮೆ ಶಿವಶಂಕರಪ್ಪ ಪ್ರತಿನಿಧಿಸಿದ್ದರು. 1999ರ ಲೋಕಸಭಾ ಚುನಾವಣೆ ಹೊರತುಪಡಿಸಿ ಯಾವ ಚುನಾವಣೆಯಲ್ಲಿಯೂ ಅವರು ಸೋಲು ಅನುಭವಿಸಿರಲಿಲ್ಲ.

ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಾವಣಗೆರೆಯ ಹಳೆಯ ಭಾಗ ಹೆಚ್ಚಾಗಿದೆ. ಮುಸ್ಲಿಂ ಸಮುದಾಯದ ಮತಗಳು ಇಲ್ಲಿ ನಿರ್ಣಾಯಕ. ಕ್ಷೇತ್ರ ರಚನೆಯಾದಾಗಿನಿಂದಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಶಾಮನೂರು ಶಿವಶಂಕರಪ್ಪ ಅವರು ಕ್ಷೇತ್ರದ ಮೇಲೆ ಪ್ರಬಲ ಹಿಡಿತ ಸಾಧಿಸಿದ್ದರು. ಆದರೂ, ವಿಧಾನಸಭೆಗೆ 2023ರಲ್ಲಿ ಚುನಾವಣೆ ಘೋಷಣೆಯಾದಾಗ ಕಾಂಗ್ರೆಸ್ನ ಐವರು ನಾಯಕರು ಟಿಕೆಟ್ಗೆ ಅರ್ಜಿ ಸಲ್ಲಿಸಿದ್ದರು. ಉಪಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಕೋರಿ ಮುಸ್ಲಿಂ ಸಮುದಾಯ ಕೂಡ ಬೇಡಿಕೆ ಮುಂದಿಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶಾಮನೂರು ಶಿವಶಂಕರಪ್ಪ ಅವರನ್ನು ಕಳೆದುಕೊಂಡ ಶೋಕದಿಂದ ಪಕ್ಷ ಇನ್ನೂ ಹೊರಬಂದಿಲ್ಲ. ಉಪಚುನಾವಣೆ ಕುರಿತ ಚರ್ಚೆ ಅಪ್ರಸ್ತುತ.
ಎಚ್.ಬಿ. ಮಂಜಪ್ಪ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ

‘ಪಕ್ಷ ಈ ಕ್ಷೇತ್ರವನ್ನು ಕಳೆದುಕೊಳ್ಳುವುದಿಲ್ಲ. ಶಾಮನೂರು ಕುಟುಂಬದ ಸದಸ್ಯರೊಬ್ಬರು ಕಣಕ್ಕೆ ಇಳಿದರೆ ಗೆಲುವು ಸುಲಭ. ಶಿವಶಂಕರಪ್ಪ ಅವರ ಹಿರಿಯ ಪುತ್ರ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಸ್. ಬಕ್ಕೇಶ್, ಉದ್ಯಮಿ ಎಸ್.ಎಸ್. ಗಣೇಶ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪುತ್ರ ಸಮರ್ಥ ಶಾಮನೂರು ಬಗೆಗೂ ಕ್ಷೇತ್ರದಲ್ಲಿ ಒಲವಿದೆ. ಶಾಮನೂರು ಕುಟುಂಬದ ತೀರ್ಮಾನ ಆಧರಿಸಿ ಪಕ್ಷ ನಿಲುವು ತಳೆಯಲಿದೆ’ ಎಂದು ಕಾಂಗ್ರೆಸ್ ಮುಖಂಡರೊಬ್ಬರು ವಿವರಿಸಿದರು.

ಶಾಮನೂರು ಶಿವಶಂಕರಪ್ಪ ದಾವಣಗೆರೆಯ ಆಲದ ಮರದಂತೆ ಇದ್ದರು. ಅವರನ್ನು ಕಳೆದುಕೊಂಡ ಶೋಕವಿದೆ. ಉಪಚುನಾವಣೆಯ ಬಗ್ಗೆ ಪಕ್ಷ ಆಲೋಚನೆ ಮಾಡಿಲ್ಲ.
ಎನ್.ರಾಜಶೇಖರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ

ಖಾತೆ ತೆರೆಯದ ಬಿಜೆಪಿ

ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಖಾತೆ ತೆರೆಯಲು ಬಿಜೆಪಿಗೆ ಈವರೆಗೆ ಸಾಧ್ಯವಾಗಿಲ್ಲ. ಶಾಮನೂರು ಶಿವಶಂಕರಪ್ಪ ಅವರ ಅನುಪಸ್ಥಿತಿಯನ್ನು ಅವಕಾಶವಾಗಿ ಬಳಸಿಕೊಳ್ಳುವ ಸವಾಲು ಕೇಸರಿ ಪಾಳೆಯದ ಮುಂದಿದೆ.

ಬಿಜೆಪಿಯ ಯಶವಂತರಾವ್ ಜಾಧವ್ 2008 2018 ಬಿ.ಜೆ. ಅಜಯ್ಕುಮಾರ್ 2023 ಹಾಗೂ 2013ರಲ್ಲಿ ಬಿ. ಲೋಕೇಶ್ ಅವರು ಶಾಮನೂರು ಶಿವಶಂಕರಪ್ಪ ವಿರುದ್ಧ ಸೋಲು ಕಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.