ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿದರು.
ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಕುಣಿಯಲ್ಲಿ ಯೋಗ ಭಂಗಿಯಲ್ಲಿ ಕೂರಿಸಲಾಯಿತು. ಜೊತೆಗೆ 500ಕ್ಕೂ ಹೆಚ್ಚು ವಿಭೂತಿಗಳನ್ನು ಇಡಲಾಯಿತು. ಪುತ್ರರಾದ ಎಸ್.ಎಸ್. ಬಕ್ಕೇಶ್, ಎಸ್.ಎಸ್. ಗಣೇಶ್ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಅಂತಿಮ ವಿಧಿವಿಧಾನ ಪೂರೈಸಿದರು.
ಶಿವಶಂಕರಪ್ಪ ಅವರ ಪತ್ನಿ ಪಾರ್ವತಮ್ಮ ಅವರ ಸಮಾಧಿಯ ಪಕ್ಕದಲ್ಲೇ 9x5 ಅಡಿ ಸುತ್ತಳತೆಯ ಕುಣಿಯಲ್ಲಿ ದೀಪಗಳನ್ನು ಇಡಲು ಮೆಟ್ಟಿಲು ನಿರ್ಮಾಣ ಮಾಡಲಾಗಿತ್ತು. ವಿವಿಧ ಮಠಾಧೀಶರ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿದವು.