ದಾವಣಗೆರೆ: ಅಗಲಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಶ್ರದ್ಧಾಂಜಲಿ ಮತ್ತು ನುಡಿನಮನ ಸಮಾರಂಭವನ್ನು ಆನೆಕೊಂಡದ ಕಲ್ಲೇಶ್ವರ ಮಿಲ್ ಸಮೀಪ ಶುಕ್ರವಾರ ಬೆಳಿಗ್ಗೆ 10.15ಕ್ಕೆ ಆಯೋಜಿಸಲಾಗಿದೆ. ಸಮಾರಂಭಕ್ಕೆ ರಾಜ್ಯದ ವಿವಿಧೆಯಿಂದ ಗಣ್ಯರು, ಮಠಾಧೀಶರು ಹಾಗೂ ಅಭಿಮಾನಿಗಳು ಆಗಮಿಸಲಿದ್ದಾರೆ.

ಶಿವಶಂಕರಪ್ಪ ಅವರ ಸಮಾಧಿ ಸಮೀಪವೇ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಸುವಂತೆ ಮಠಾಧೀಶರು ನೀಡಿದ ಸಲಹೆ ಮೇರೆಗೆ ಆನೆಕೊಂಡದಲ್ಲಿ ನುಡಿನಮನ ಹಮ್ಮಿಕೊಳ್ಳಲಾಗಿದೆ. ಅಂದಾಜು 100 ಎಕರೆ ಕೃಷಿ ಭೂಮಿಯನ್ನು ಸಮತಟ್ಟು ಮಾಡಿ ಕಾರ್ಯಕ್ರಮಕ್ಕೆ ಸಿದ್ಧಪಡಿಸಲಾಗಿದೆ.

ಶಿವಶಂಕರಪ್ಪ ಅವರ ಸಮಾಧಿಗೆ ಪುಷ್ಪಾರ್ಚನೆ ನೆರವೇರಿಸಿದ ಗಣ್ಯರು, ಸಮಾರಂಭದ ಸ್ಥಳಕ್ಕೆ ಆಗಮಿಸಲಿದ್ದಾರೆ. ಬೃಹತ್ ಪೆಂಡಾಲ್ ಹಾಕಲಾಗಿದ್ದು, ಸಭಾಂಗಣ, ಗಣ್ಯರು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಸಭಾಂಗಣದಲ್ಲಿ ಮೂರು ಸಮಾನಾಂತರ ವೇದಿಕೆಗಳನ್ನು ನಿರ್ಮಿಸಲಾಗಿದೆ. ಮಠಾಧೀಶರು, ಗಣ್ಯರು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರತ್ಯೇಕ ವೇದಿಕೆಗಳಿವೆ.

25,000 ಆಸನ ವ್ಯವಸ್ಥೆಗಳನ್ನು ಅಳವಡಿಸಲಾಗಿದ್ದು, 40,000ಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ್ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ. ವಚನ ಗಾಯನ, ಮಠಾಧೀಶರ ಪ್ರಚನ, ಗುಣಗಾನದ ಮೂಲಕ ಶಿವಶಂಕರಪ್ಪ ಅವರಿಗೆ ನುಡಿನಮನ ಸಲ್ಲಿಸಲಾಗುತ್ತದೆ. ಶಿವಶಂಕರಪ್ಪ ಅವರ ಮಕ್ಕಳು, ಮೊಮ್ಕಕ್ಕಳು ಕೂಡ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ, ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ, ಉಜ್ಜಯಿನಿಯ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಕೇದಾರದ ಭೀಮಾಶಂಕರಲಿಂಗ ಸ್ವಾಮೀಜಿ, ಶ್ರೀಶೈಲದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿ ನಾಡಿನ ಹಲವು ಮಠಾಧೀಶರು ಆಗಮಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್, ರಣದೀಪ್ ಸುರ್ಜೇವಾಲ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸಾಂತ್ವನ ಹೇಳಿದ ಎಚ್ಡಿಕೆ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಕಲ್ಲೇಶ್ವರ ಮಿಲ್ಗೆ ಭೇಟಿ ನೀಡಿ ಶಾಮನೂರು ಶಿವಶಂಕರಪ್ಪ ಅವರ ಸಮಾದಿಗೆ ನಮನ ಸಲ್ಲಿಸಿದರು. ಎಂಸಿಸಿ ಬಡಾವಣೆಯ ಮನೆಗೆ ತೆರಳಿ ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಬಕ್ಕೇಶ್ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಾಂತ್ವನ ಹೇಳಿದರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಇದ್ದರು.

ನುಡಿನಮನ ಕಾರ್ಯಕ್ರಮಕ್ಕೂ ಮುನ್ನಾ ದಿನವೇ ಆಗಮಿಸಿದ ಕುಮಾರಸ್ವಾಮಿ ಅವರು ಶಾಮನೂರು ಶಿವಶಂಕರಪ್ಪ ಅವರಿಗೆ ಗೌರವ ಸಲ್ಲಿಸಿದರು. ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾಜಿ ಸಚಿವ ಸಾ.ರಾ. ಮಹೇಶ್ ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಎಂ. ರಮೇಶ್ ಗೌಡ ಇದ್ದರು. ಅಲ್ಲದೇ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಸೇರಿ ಅನೇಕರು ಶಾಮನೂರು ಶಿವಶಂಕರಪ್ಪ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಸಿಎಂ ಡಿಸಿಎಂ ಆಗಮನ

ಶಿವಶಂಕರಪ್ಪ ಅವರ ನುಡಿನಮನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ 11ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ಪ್ರಯಾಣ ಬೆಳೆಸಲಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮಧ್ಯಾಹ್ನ 12.15ಕ್ಕೆ ದಾವಣಗೆರೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಮಧ್ಯಾಹ್ನ 3ಕ್ಕೆ ಇಬ್ಬರೂ ಬೆಂಗಳೂರಿಗೆ ತೆರಳಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಬೆಳಿಗ್ಗೆ 10.25ಕ್ಕೆ ಕಲ್ಲೇಶ್ವರ ರೈಸ್ ಮಿಲ್ಗೆ ಭೇಟಿ ನೀಡಲಿದ್ದಾರೆ. ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಬೆಳಿಗ್ಗೆ 11ಕ್ಕೆ ಆಗಮಿಸಲಿದ್ದಾರೆ.

ಹಲವೆಡೆ ಊಟದ ವ್ಯವಸ್ಥೆ

ಶ್ರದ್ಧಾಂಜಲಿಯ ಅಂಗವಾಗಿ ಕಾರ್ಯಕ್ರಮ ಸ್ಥಳದ ಜೊತೆಗೆ ನಗರದ ವಿವಿಧೆಡೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮ ಸ್ಥಳಕ್ಕೆ ಬರಲು ಸಾಧ್ಯವಾಗದವರು ಕಲ್ಯಾಣ ಮಂಟಪಗಳಲ್ಲಿ ಊಟ ಮಾಡಬಹುದಾಗಿದೆ. ಕಾರ್ಯಕ್ರಮ ಸ್ಥಳದಲ್ಲಿ ಬೃಹತ್ ಪೆಂಡಾಲ್ ಹಾಕಿ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ. 90 ಕೌಂಟರ್ಗಳನ್ನು ತೆರೆದು ಊಟ ನೀಡಲಾಗುತ್ತದೆ. ಗಣ್ಯರಿಗೆ ಹವಾನಿಯಂತ್ರಿತ ಪೆಂಡಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೇ ಶಾಮನೂರು ರಸ್ತೆಯ ಬಾಪೂಜಿ ಸಮುದಾಯ ಭವನ ಬಕ್ಕೇಶ್ವರ ಕಲ್ಯಾಣ ಮಂಟಪ ಹಾಗೂ ರೇಣುಕ ಮಂದಿರದಲ್ಲಿ ಊಟ ಆಯೋಜಿಸಲಾಗಿದೆ. ಎಲ್ಲೆಡೆಯೂ ಒಂದೇ ರೀತಿಯ ಊಟದ ವ್ಯವಸ್ಥೆ ಇರುತ್ತದೆ ಎಂದು ಕುಟುಂಬ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.