ದಾವಣಗೆರೆ: ಈಚೆಗೆ ನಿಧನರಾದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮವನ್ನು ನಗರದಲ್ಲಿ ಡಿ.26ರಂದು ಬೆಳಿಗ್ಗೆ 10.15ಕ್ಕೆ ಹಮ್ಮಿಕೊಳ್ಳಲಾಗಿದೆ. 100 ಎಕರೆ ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು, ಶಾಸಕರು, ವಿರೋಧ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಪಂಚಪೀಠಾಧೀಶ್ವರರು, ಸಿರಿಗೆರೆಯ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಧಾರ್ಮಿಕ ಮುಖಂಡರು ಭಾಗಿಯಾಗಲಿದ್ದಾರೆ.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.15ಕ್ಕೆ ನುಡಿನಮನ ಕಾರ್ಯಕ್ರಮ ಆರಂಭವಾಗಲಿದೆ. 13ನೇ ದಿನದ ಕಾರ್ಯದ ಅಂಗವಾಗಿ ನಗರದ ಹಲವು ಕಲ್ಯಾಣ ಮಂಟಪಗಳು ಸೇರಿದಂತೆ ವಿವಿಧಡೆ ಸಾರ್ವಜನಿಕರು ಮತ್ತು ಅಭಿಮಾನಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.