ಜಿಲ್ಲೆಯ ಎಲ್ಲ ಜನರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನ ಪತ್ರಿಕೆಗಳನ್ನು ಮನೆ–ಮನೆಗಳಿಗೆ ತಲುಪಿಸಲಾಗಿದೆ. ಎಲ್ಲರೂ ಆಗಮಿಸಿ ನುಡಿನಮನದಲ್ಲಿ ಪಾಲ್ಗೊಳ್ಳಬೇಕು
ಡಾ.ಪ್ರಭಾ ಮಲ್ಲಿಕಾರ್ಜುನ್ ಸಂಸದೆ
ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಶಿವಶಂಕರಪ್ಪ ಬೆಳೆದ ಪರಿ ವಿಸ್ಮಯ ಮೂಡಿಸಿದೆ. ರಾಜಕೀಯ ಶಿಕ್ಷಣ ಸಮಾಜ ಸೇವೆ ಸೇರಿ ಹಲವು ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆ ಸ್ಮರಣೀಯ
ಅಣಬೇರು ರಾಜಣ್ಣ ಉಪಾಧ್ಯಕ್ಷ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ
25000ಕ್ಕೂ ಹೆಚ್ಚು ಆಸನ
ಕಲ್ಲೇಶ್ವರ ಮಿಲ್ ಹಿಂಭಾಗದ 100 ಎಕರೆ ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿದೆ. 25000ಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಮಠಾಧೀಶರು ಗಣ್ಯರು ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಇದೆ. ಕಾರ್ಯಕ್ರಮ ಸ್ಥಳದಲ್ಲಿ ಊಟಕ್ಕೆ 90 ಕೌಂಟರ್‌ಗಳನ್ನು ತೆರೆಯಲಾಗಿದೆ. ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನ ನಿಜಲಿಂಗಪ್ಪ ಬಡಾವಣೆಯ ಬಕ್ಕೇಶ್ವರ ಕಲ್ಯಾಣ ಮಂಟಪ ಹಾಗೂ ಪಿ.ಬಿ. ರಸ್ತೆಯ ಅಭಿನವ ರೇಣುಕ ಮಂದಿರದಲ್ಲಿಯೂ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.
ಸಂಚಾರ ಮಾರ್ಗ ಬದಲಾವಣೆ
ನುಡಿನಮನ ಕಾರ್ಯಕ್ರಮಕ್ಕೆ ಗಣ್ಯರು ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಶುಕ್ರವಾರ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ವಾಹನ ನಿಲುಗಡೆಗೂ ಪೊಲೀಸರು ಸ್ಥಳ ಗುರುತಿಸಿದ್ದಾರೆ. ಹರಪನಹಳ್ಳಿ ಕಡೆಯಿಂದ ಬರುವ ವಾಹನಗಳು ಬಸಾಪುರ ಎಪಿಎಂಸಿ ಜಾನುವಾರು ಮಾರುಕಟ್ಟೆ ಮೂಲಕ ಪಿ.ಬಿ. ರಸ್ತೆ ಸಂಪರ್ಕಿಸಬೇಕು. ಜಗಳೂರು ರಸ್ತೆಯಲ್ಲಿ ಸಂಚರಿಸುವ ವಾಹನಗಳು ಅಣಜಿ ಆನಗೋಡು ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಬೇಕು. ಬಸಾಪುರ ರಸ್ತೆಯ ವಿನಾಯಕ ಗೋದಾಮು ಸಮೀಪ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.