ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Published 31 ಮೇ 2024, 15:44 IST
Last Updated 31 ಮೇ 2024, 15:44 IST
ಅಕ್ಷರ ಗಾತ್ರ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಅನಾರೋಗ್ಯದಿಂದ ಶುಕ್ರವಾರ ಆಸ್ಪತ್ರೆಗೆ ದಾಖಲಾದರು.

ಎರಡು ದಿನಗಳಿಂದ ಅವರಿಗೆ ಸುಸ್ತಾಗಿತ್ತು. ಅವರದೇ ಆದ ಎಸ್‌.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಹೃದಯ ಬಡಿತದಲ್ಲಿ ತುಸು ಸಮಸ್ಯೆಯಾಗಿತ್ತು. ವೈದ್ಯರು ತಾತ್ಕಾಲಿಕ ಪೇಸ್‌ಮೇಕರ್ ಅಳವಡಿಸಿದ ನಂತರ ಹೃದಯ ಬಡಿತ ಸಹಜ ಸ್ಥಿತಿಗೆ ಮರಳಿತು ಎಂದು ಮೂಲಗಳು ತಿಳಿಸಿವೆ.

ನಂತರ ಅವರನ್ನು ಕಾರಿನಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರಿಗೆ ಶಾಶ್ವತ ಪೇಸ್‌ಮೇಕರ್ ಅಳವಡಿಸಲಾಗುವುದು.

‘ಇದು ವಯೋಸಹಜ ಆರೋಗ್ಯ ಸಮಸ್ಯೆಯಾಗಿದೆ. ಅವರು ಮಾತನಾಡುತ್ತಿದ್ದು, ಆತಂಕಪಡುವ ಅಗತ್ಯವಿಲ್ಲ. ಒಂದೆರಡು ದಿನಗಳಲ್ಲಿ ಅವರು ದಾವಣಗೆರೆಗೆ ವಾಪಸಾಗಲಿದ್ದಾರೆ’ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

b

ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಅವರು ಆರೋಗ್ಯವಾಗಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು, ಎಸ್.ಎಸ್.ಎಂ ಅಭಿಮಾನಿಗಳು ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT