ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್: ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Published 15 ಜೂನ್ 2024, 4:04 IST
Last Updated 15 ಜೂನ್ 2024, 4:04 IST
ಅಕ್ಷರ ಗಾತ್ರ

ದಾವಣಗೆರೆ: ‘ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್’ ವತಿಯಿಂದ 2024-25ನೇ ಸಾಲಿಗೆ ರಾಜ್ಯದ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಟ್ರಸ್ಟ್‌ ವತಿಯಿಂದ 12 ವರ್ಷಗಳಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಹಿಂದಿನ ವರ್ಷ ಸುಮಾರು 900 ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಈ ಬಾರಿ ಐಟಿಐ, ಡಿಪ್ಲೊಮಾ, ಪದವಿ, ವೃತ್ತಿ ಶಿಕ್ಷಣ ಕೋರ್ಸ್‌, ಕಾನೂನು ಪದವಿ, ಮ್ಯಾನೇಜ್‌ಮೆಂಟ್ ಮತ್ತು ಇತರೆ ವೃತ್ತಿ ಶಿಕ್ಷಣ ಕಾಲೇಜುಗಳಲ್ಲಿ 2024-25ರ ಶೈಕ್ಷಣಿಕ ಅವಧಿಯಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಆಯಾ ಕಾಲೇಜುಗಳ ವಾರ್ಷಿಕ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿವೇತನ ನೀಡಲಾಗುವುದು.

ವಿದ್ಯಾರ್ಥಿವೇತನವನ್ನು ನಿರೀಕ್ಷಿಸುವ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾನ್ವಿತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಯಾ ಶಾಲೆ- ಕಾಲೇಜುಗಳ ಮುಖ್ಯಸ್ಥರ ಮೂಲಕ ಪ್ರಮಾಣಪತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಮತ್ತು ವಿವರಗಳಿಗಾಗಿ ಟ್ರಸ್ಟ್‌ನ ವೆಬ್‍ಸೈಟ್ www.ssjanakalyantrust.org  ಸಂಪರ್ಕಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 31 ಕಡೆಯ ದಿನ ಎಂದು ಟ್ರಸ್ಟ್ ಕಾರ್ಯದರ್ಶಿ ಅಥಣಿ ವೀರಣ್ಣ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT