ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜನ್ಮದಿನದ ಸಂಭ್ರಮದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ

ನಿವಾಸಕ್ಕೆ ಶಾಸಕರು, ಪಕ್ಷದ ಮುಖಂಡರು, ಅಧಿಕಾರಿಗಳು ಭೇಟಿ, ಶುಭಹಾರೈಕೆ
Published 16 ಜೂನ್ 2024, 16:18 IST
Last Updated 16 ಜೂನ್ 2024, 16:18 IST
ಅಕ್ಷರ ಗಾತ್ರ

ದಾವಣಗೆರೆ: ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರ 94ನೇ ವರ್ಷದ ಜನ್ಮದಿನವನ್ನು ಅವರ ಕುಟುಂಬದವರು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾನುವಾರ ಸಂಭ್ರಮದಿಂದ ಆಚರಿಸಿದರು. 

ವಿವಿಧೆಡೆಯಿಂದ ಆಗಮಿಸಿದ್ದ ಬೆಂಬಲಿಗರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಶಿವಶಂಕರಪ್ಪ ಅವರಿಗೆ ಜನ್ಮದಿನದ ಶುಭ ಕೋರಿದರು.

ಶಾಸಕರಾದ ಡಿ.ಜಿ.ಶಾಂತನಗೌಡ, ಕೆ.ಎಸ್.ಬಸವಂತಪ್ಪ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್.ಕೆ.ಶೆಟ್ಟಿ, ಎಸ್.ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರು ನಿವಾಸಕ್ಕೆ ಆಗಮಿಸಿ ಶುಭ ಕೋರಿದರು.

ಅಖಿಲ ಭಾರತ ವೀರಶೈವ ಮಹಾಸಭಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ರೇಣುಕ ಪ್ರಸನ್ನ, ಗುರುಮೂರ್ತಿ, ಆಂಧ್ರಪ್ರದೇಶದ ಯಲ್ಲೂರು ಸಂಸದ ಮಹೇಶ್ ಕುಮಾರ್ ಯಾದವ್, ಹುಮನಾಬಾದ್‍ನ ಕಾಂಗ್ರೆಸ್ ಮುಖಂಡ ಅಭಿಷೇಕ್, ಅರಸೀಕೆರೆ ಕೊಟ್ರೇಶ್ ಹಾಗೂ ಸಮಾಜದ ಮುಖಂಡರು ಶುಭ ಹಾರೈಸಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಎಎಸ್‌ಪಿಗಳಾದ ವಿಜಯಕುಮಾರ್ ಸಂತೋಷ್, ಮಂಜುನಾಥ ಜಿ., ಡಿವೈಎಸ್‌ಪಿಗಳು, ಇನ್‌ಸ್ಪೆಕ್ಟರ್‌ಗಳು, ಎ.ಡಿ.ಸಿ ಲೊಕೇಶ್, ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ತಹಶೀಲ್ದಾರ್‌ಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಶುಭ ಹಾರೈಸಿದರು.

ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ರಮಾನಂದ್, ಖಜಾಂಚಿ ನಿರಂಜನ್ ಹಾಗೂ ಆಡಳಿತ ಮಂಡಳಿ ಸದಸ್ಯರು, ವಿದ್ಯಾಸಂಸ್ಥೆಯ ವಿವಿಧ ಶಾಲಾ-ಕಾಲೇಜು ಮುಖ್ಯಸ್ಥರು, ಸಿಬ್ಬಂದಿ ಶುಭಕೋರಿದರು.

ದಾವಣಗೆರೆಯ ತಮ್ಮ ನಿವಾಸದಲ್ಲಿ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರು 94 ಕೆ.ಜಿ. ತೂಕದ ಕೇಕ್‌ ಕತ್ತರಿಸಿದರು
ದಾವಣಗೆರೆಯ ತಮ್ಮ ನಿವಾಸದಲ್ಲಿ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರು 94 ಕೆ.ಜಿ. ತೂಕದ ಕೇಕ್‌ ಕತ್ತರಿಸಿದರು

94 ಕೆ.ಜಿ. ತೂಕದ ಕೇಕ್

ಮಕ್ಕಳಾದ ಎಸ್.ಎಸ್.ಬಕ್ಕೇಶ್ ಎಸ್.ಗಣೇಶ್ ಸುಧಾ ರಾಜೇಂದ್ರ ಪಾಟೀಲ್ ಮಂಜುಳಾ ಶಿವಶಂಕರ್ ಶೈಲಜಾ ಭಟ್ಟಾಚಾರ್ಯ ಮೀನಾ ಪಾಟೀಲ್ ಹಾಗೂ ಸೊಸೆಯಂದಿರಾದ ಪ್ರೀತಿ ಬಕ್ಕೇಶ್ ರೇಖಾ ಗಣೇಶ್ ಡಾ.ಪ್ರಭಾ ಮಲ್ಲಿಕಾರ್ಜುನ್ (ಸಂಸದೆ) ಮತ್ತು ಮೊಮ್ಮಕ್ಕಳು ಮರಿಮೊಮ್ಮಕ್ಕಳ ಸಮ್ಮುಖದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡರು. ವಿದೇಶ ಪ್ರವಾಸದಲ್ಲಿರುವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು. ಪಾಲಿಕೆ ಮಾಜಿ ಸದಸ್ಯ ಎಸ್.ಬಸಪ್ಪ ಅವರು 94 ಕೆ.ಜಿ. ತೂಕದ ಕೇಕ್ ತಂದು ಅಭಿಮಾನ ತೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT