ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿಯನ್ನು ಶನಿಯಂತೆ ಕಾಡಲಿದ್ದಾರೆ ನಾಯ್ಡು–ನಿತೀಶ್‌: ಶಾಮನೂರು ಶಿವಶಂಕರಪ್ಪ

Published 18 ಜೂನ್ 2024, 16:00 IST
Last Updated 18 ಜೂನ್ 2024, 16:00 IST
ಅಕ್ಷರ ಗಾತ್ರ

ದಾವಣಗೆರೆ: ‘ಎನ್‌ಡಿಎ ಪಾಲುದಾರರಾಗಿರುವ ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಆಂಧ್ರದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಮತ್ತು ಜೆಡಿಯು ಮುಖಂಡ, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿಗಳಂತೆ ಕಾಡಲಿದ್ದಾರೆ. ಮೋದಿ ಅವರು ಬಹುದಿನಗಳವರೆಗೆ ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ’ ಎಂದು ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ಅಖಿಲ ಭಾರತ ವೀರಶೈವ –ಲಿಂಗಾಯತ ಮಹಾಸಭಾ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.

‘ಬಿಜೆಪಿಗೆ ಇನ್ನೂ ಹತ್ತು ಸ್ಥಾನಗಳು ಕಡಿಮೆ ಬಂದಿದ್ದರೆ ಮೋದಿ ಪ್ರಧಾನಿ ಆಗುತ್ತಿರಲಿಲ್ಲ. ಮೋದಿ ಜಪ ಮಾಡಿದ ಬಳಿಕವೂ ಬಿಜೆಪಿ ಸ್ವತಂತ್ರವಾಗಿ ಅಧಿಕಾರ ಹಿಡಿಯುವಷ್ಟು ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ. ಕೇಂದ್ರದಲ್ಲಿ ಕಿಚಡಿ ಸರ್ಕಾರ ರಚನೆಯಾಗಿದ್ದು, ಪ್ರಧಾನಿ ಹಾಗೂ ಪ್ರಭಾವಿ ಸಚಿವ ಸ್ಥಾನಗಳ ಮೇಲೆ ಎಲ್ಲರಿಗೂ ಆಸೆ ಇದೆ. ಬಹುದಿನಗಳವರೆಗೆ ಮೋದಿ ಪ್ರಧಾನಿ ಹುದ್ದೆಯಲ್ಲಿ ಇರುತ್ತಾರೆ ಎಂಬ ನಂಬಿಕೆ ಇಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT