ಶಾಸಕನಾಗಿ ಸಾಧ್ಯವಾದಷ್ಟು ನೆರವು ನೀಡಿದ್ದೇನೆ. ಮುಂದೆಯೂ ಬೆಂಬಲಿಸುತ್ತೇನೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಿ.ಪಿ. ಹರೀಶ್ ಹೇಳಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಗೋವಿಂದ ರೆಡ್ಡಿ, ಮುಖಂಡ ಚಂದ್ರಶೇಖರ್ ಪೂಜಾರ್, ಮಾಜಿ ಶಾಸಕರಾದ ಎಸ್. ರಾಮಪ್ಪ, ಎಚ್.ಎಸ್. ಶಿವಶಂಕರ್, ಮುಖಂಡ ನಂದಿಗಾವಿ ಶ್ರೀನಿವಾಸ, ಗಂಗಾಮತ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಮಾಗನಹಳ್ಳಿ ಮಂಜುನಾಥ್ ಮಾತನಾಡಿದರು.