ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18ರಿಂದ 20ರವರೆಗೆ ಶರಣ ಸಂಸ್ಕೃತಿ ಉತ್ಸವ

ಜಯದೇವ ಮುರುಘರಾಜೇಂದ್ರ ಸ್ವಾಮೀಜಿಯವರ 62ನೇ ಸ್ಮರಣೋತ್ಸವ: ಮುರುಘಾಶ್ರೀ
Last Updated 3 ಜನವರಿ 2019, 13:24 IST
ಅಕ್ಷರ ಗಾತ್ರ

ದಾವಣಗೆರೆ: ಜಯದೇವ ಮುರುಘರಾಜೇಂದ್ರ ಸ್ವಾಮೀಜಿ ಅವರ 62ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವ, ಸಹಜ ಶಿವಯೋಗ ಕಾರ್ಯಕಮಗಳನ್ನು ಜ.18, 19 ಮತ್ತು 20ರಂದು ಇಲ್ಲಿನ ಬಸವಕೇಂದ್ರ ಶಿವಯೋಗಾಶ್ರಮದಲ್ಲಿ ನಡೆಯಲಿದೆ ಎಂದು ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದರು.

ಜ.18ರಂದು ಬೆಳಿಗ್ಗೆ 7.30ಕ್ಕೆ ಮಂಡ್ಯದ ಅಣೆಕಟ್ಟು ನಿರ್ಮಾತೃ ಕಾಮೇಗೌಡ ಬಸವತತ್ವ ಧ್ವಜಾರೋಹಣ ಮಾಡಲಿದ್ದಾರೆ. 7.45ಕ್ಕೆ ಖಜೂರಿ ಮುರುಘೇಂದ್ರ ಕೋರಣೇಶ್ವರ ಸ್ವಾಮೀಜಿ, ಚನ್ನಗಿರಿ ಜಯದೇವ ಸ್ವಾಮೀಜಿ, ಗುರುಮಠಕಲ್‌ ಶಾಂತವೀರ ಸ್ವಾಮೀಜಿ ಸಮ್ಮಿಖದಲ್ಲಿ ಸಹಜ ಶಿವಯೋಗ ಕಾಯಕ್ರಮ ನಡೆಯಲಿದೆ. ಬೆಳಿಗ್ಗೆ 11ಕ್ಕೆ ಮುರುಘಾ ಶರಣರು ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಲಿದ್ದಾರೆ. ಸಂಜೆ 6.30ಕ್ಕೆ ಜಯದೇವಶ್ರೀ ಮತ್ತು ಶೂನ್ಯಪೀಠ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜ.19ರಂದು ಬೆಳಿಗ್ಗೆ 7.30ಕ್ಕೆ ಹೆಬ್ಬಾಳು ವಿರಕ್ತಮಠದ ಮಹಾಂತರುದ್ರೇಶ್ವರ ಸ್ವಾಮೀಜಿ, ರಾವಂದೂರು ಮುರುಘಾಮಠದ ಮೋಕ್ಷಪತಿ ಸ್ವಾಮೀಜಿ, ಚಿತ್ರದುರ್ಗ ಭೋವಿಮಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಪಾಂಡೋಮಟ್ಟಿ ವಿರಕ್ತಮಠದ ಗುರುಬಸವಸ್ವಾಮೀಜಿ ಚಿತ್ರದುರ್ಗ ಮಡಿವಾಳ ಗುರುಪೀಠದ ಬಸವಮಾಚಿದೇವ ಸ್ವಾಮೀಜಿ ಸಮ್ಮುಖದಲ್ಲಿ ಸಹಜ ಶಿವಯೋಗ ನಡೆಯಲಿದೆ ಎಂದರು.

ಸಂಜೆ 6.30ಕ್ಕೆ ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಧುರೆ ಭಗಿರಥ ಗುರುಪೀಠದ ಪುರುಷೋತ್ತಮನಂದಪುರಿ ಸ್ವಾಮೀಜಿ, ಲಾಲನಹಳ್ಳಿ ಬಸವಕೇಂದ್ರದ ಶರಣೆ ಜಯದೇವಿ ತಾಯಿ ಸಾನ್ನಿಧ್ಯ ವಹಿಸಲಿದ್ದಾರೆ. ರಾಜ್ಯ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ, ಶಾಸಕರಾದ ಎಸ್‌.ಎ. ರವೀಂದ್ರನಾಥ್, ವಿ. ಸೋಮಣ್ಣ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಮೈತ್ರೇಯಿ ಗದಿಗೆಪ್ಪಗೌಡರ, ಮೇಯರ್‌ ಶೋಭಾ ಪಲ್ಲಾಗಟ್ಟೆ, ಪ್ರಭಾ ಮಲ್ಲಿಕಾರ್ಜುನ, ಡಾ. ಶಶಿಕಲಾ ಕೃಷ್ಣಮೂರ್ತಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜ.20ರಂದು ಬೆಳಿಗ್ಗೆ 7.30ಕ್ಕೆ ಶಿರಾಳಕೊಪ್ಪ ವಿರಕ್ತಮಠದ ಸಿದ್ದೇಶ್ವರ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಚನ್ನಬಸವ ಸ್ವಾಮೀಜಿ, ಕವಲೆತ್ತು ಬಸವಕೇಂದ್ರದ ಶರಣೆ ಮುಕ್ತಾಯಕ್ಕ ಸಮ್ಮುಖದಲ್ಲಿ ಸಹಜ ಶಿವಯೋಗ ನಡೆಯಲಿದೆ ಎಂದು ಹೇಳಿದರು.

ಬೆಳಿಗ್ಗೆ 9.30ಕ್ಕೆ ಬಸವಕೇಂದ್ರದಲ್ಲಿ ನೇತ್ರ ಉಚಿತ ಪರೀಕ್ಷೆ ಮತ್ತು ಚಿಕಿತ್ಸೆ, 9.45ಕ್ಕೆ ಆರೋಗ್ಯ ಉಚಿತ ಪರೀಕ್ಷೆ ಹಾಗೂ ಔಷಧ ವಿತರಣೆ ಉದ್ಘಾಟನೆಗೊಳ್ಳಲಿದೆ. ಮೂರುದಿನವೂ ಸಂಜೆ ಸಾಂಸ್ಕೃತಿಕ ಸಂಭ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಬ್ಯಾಡಗಿ ಮಲ್ಲಿಕಾರ್ಜುನ ಸ್ವಾಮೀಜಿ, ನಿರಂಜನ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT