ಶಿಕಾರಿಪುರ: ಶಿರಾಳಕೊಪ್ಪ ರಸ್ತೆಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಮುಂಭಾಗ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತಪಟ್ಟ ಯುವಕ ದೊಡ್ಡಪೇಟೆ ನಿವಾಸಿ ಗಜೇಂದ್ರ ಆಚಾರ್ ಎಂದು ತಿಳಿದು ಬಂದಿದೆ. ಮೃತ ಯುವಕ ಬುಧವಾರ ತನ್ನ ಜನ್ಮದಿನ ಆಚರಿಸಿಕೊಂಡಿದ್ದ. ಹಿಂಬದಿ ಸವಾರನಿಗೆ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.