ಗುರುವಾರ , ಜೂನ್ 30, 2022
21 °C
ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮ

ವಿದ್ಯುತ್ ಶಾರ್ಟ್ ಸರ್ಕೀಟ್‌: ಎಲೆಕ್ಟ್ರಾನಿಕ್ ಉಪಕರಣಗಳು ಭಸ್ಮ

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಇಲ್ಲಿನ ಸಿದ್ದವೀರಪ್ಪ ಬಡಾವಣೆಯ ಬಿಐಇಟಿ ರಸ್ತೆಯಲ್ಲಿರುವ ಕಟ್ಟಡದಲ್ಲಿ ಫ್ಯೂಚರ್‌ ಐಟಿ ಸೊಲ್ಯೂಷನ್ಸ್ ಮಳಿಗೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಬಿದ್ದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟು ಭಸ್ಮವಾಗಿವೆ.

ಸೋಮವಾರ ಸಂಜೆಯ ವೇಳೆ ವಿದ್ಯುತ್ ಶಾರ್ಟ್‌ ಸರ್ಕೀಟ್ ಆಗಿದ್ದು, ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಇಂಟರ್ನೆಟ್‌, ಸಿಸಿಟಿವಿ ಕ್ಯಾಮೆರಾಗಳ ದುರಸ್ತಿಗೆ ಸಂಬಂಧಪಟ್ಟ ಮಳಿಗೆ ಇದಾಗಿದ್ದು, ನೆಟ್‌ವರ್ಕ್‌ ಮಟಿರೀಯಲ್ಸ್, ಫೈಬರ್ ಕೇಬಲ್‌ಗಳು, ದಾಖಲೆಗಳು ಸುಟ್ಟು ಹೋಗಿವೆ. ಕಟ್ಟಡದಲ್ಲಿ ಯಾರೂ ಇರಲಿಲ್ಲ.

ವಿದ್ಯಾನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು