ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಧರ್ಮ ಗಾಳಿ ತಣ್ಣಗಾಗಿಲ್ಲ: ಶ್ರೀಶೈಲ ಶ್ರೀ ಕಳವಳ

Last Updated 2 ಮೇ 2019, 15:33 IST
ಅಕ್ಷರ ಗಾತ್ರ

ದಾವಣಗೆರೆ: ‘ವೀರಶೈವ ಲಿಂಗಾಯತ ಸಮಾಜದಲ್ಲಿ ಒಂದು ವರ್ಷದ ಹಿಂದೆ ಬೀಸಿದ್ದ ಲಿಂಗಾಯತ ಪ್ರತ್ಯೇಕ ಧರ್ಮದಬಿರುಗಾಳಿ ಇನ್ನೂ ಸಂಪೂರ್ಣವಾಗಿ ತಣ್ಣಗಾಗಿಲ್ಲ’ ಎಂದು ಶ್ರೀಶೈಲ ಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ಪುನರಾಯ್ಕೆಯಾದ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ನಗರದ ಜಗದ್ಗುರು ಪಂಚಾಚಾರ್ಯ ಮಂದಿರದಲ್ಲಿ ಗುರುವಾರ ಸನ್ಮಾನಿಸಿ ಅವರು ಮಾತನಾಡಿದರು.

‘ಎರಡನೇ ಅವಧಿಗೆ ಮಹಾಸಭಾ ಅಧ್ಯಕ್ಷರಾಗಿ ಶಾಮನೂರು ಆಯ್ಕೆಯಾಗಿರುವುದು ವೀರಶೈವ ಲಿಂಗಾಯತ ಸಮಾಜದ ಪುಣ್ಯ. ಸಮಾಜದಲ್ಲಿ ಬಿರುಗಾಳಿ ಬೀಸಿದಾಗ ಶಾಮನೂರು ಬದಲು ಬೇರೆ ಯಾರೇ ಮಹಾಸಭಾದ ಅಧ್ಯಕ್ಷರಾಗಿದ್ದರೂ ಸಮಾಜದ ಸ್ಥಿತಿ ಏನಾಗುತ್ತಿತ್ತೋ ಗೊತ್ತಿಲ್ಲ. ಈ ಗಾಳಿ ತಣ್ಣಗಾಗುವವರೆಗೂ ಮಹಾಸಭಾದ ಅಧ್ಯಕ್ಷರಾಗಿ ಅವರೇ ಮುಂದುವರಿಯಬೇಕು ಎಂಬುದು ಪೀಠದ ಆಶಯವಾಗಿತ್ತು’ ಎಂದು ಸ್ವಾಮೀಜಿ ಹೇಳಿದರು.

‘ಇತ್ತೀಚೆಗೆ ಮತ್ತೆ ಪ್ರತ್ಯೇಕ ಧರ್ಮದ ವಿಚಾರ ಚರ್ಚೆಗೆ ಬರುತ್ತಿದೆ. ಸಮಾಜ ಕವಲು ದಾರಿಯಲ್ಲಿ ಹೋಗುತ್ತಿದ್ದು, ಶಾಮನೂರು ಅದನ್ನು ತಪ್ಪಿಸಬೇಕು. ಸಮಾಜ ಒಗ್ಗಟ್ಟಾಗಿರಬೇಕು’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT