ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧಗಂಗಾ ಸುವರ್ಣ ಮಹೋತ್ಸವ ಕ್ವಿಜ್‌

Last Updated 12 ಏಪ್ರಿಲ್ 2019, 14:58 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ಏಳನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗಾಗಿ ಸುವರ್ಣ ಮಹೋತ್ಸವ ಕ್ವಿಜ್‌–2019 ಗುರುವಾರ ನಡೆಯಿತು.

ಸಂಸ್ಥೆಯ ನಿರ್ದೇಶಕ ಡಾ. ಜಯಂತ್‌ ತ್ರಿವರ್ಣ ಧ್ವಜದ ನೊರೆಯ ಬುಗ್ಗೆಯನ್ನು ಉಕ್ಕಿಸಿ ಕ್ವಿಜ್‌ಗೆ ಚಾಲನೆ ನೀಡಿದರು. ಜಿಲ್ಲೆಯ ವಿವಿಧ ಶಾಲೆಗಳಿಂದ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಒ.ಆರ್‌.ಎಂ ಶೀಟ್‌ನಲ್ಲಿ ಉತ್ತರ ಬರೆದರು. 60 ನಿಮಿಷಗಳಲ್ಲಿ 60 ಪ್ರಶ್ನೆಗಳಿಗೆ ಉತ್ತರ ಗುರುತಿಸುವ ಸವಾಲನ್ನು ವಿದ್ಯಾರ್ಥಿಗಳು ಎದುರಿಸಿದರು.

ಮೊದಲ ಬಹುಮಾನ ಬಹುಮಾನ ₹ 15 ಸಾವಿರ, ದ್ವಿತೀಯ ಬಹುಮಾನ ₹ 10 ಸಾವಿರ ಹಾಗೂ ತೃತೀಯ ಬಹುಮಾನ ₹ 5 ಸಾವಿರ ಮತ್ತು ತಲಾ ₹ 1,000ದಂತೆ 10 ಸಮಾಧಾನಕರ ಬಹುಮಾನ ನೀಡಲಾಗುತ್ತಿದೆ. ರಾಜ್ಯ ಪಠ್ಯಕ್ರಮದ ಇಂಗ್ಲಿಷ್‌ ಮತ್ತು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಕ್ವಿಜ್‌ನಲ್ಲಿ ಪಾಲ್ಗೊಂಡಿದ್ದರು.

ಸುವರ್ಣ ಮಹೋತ್ಸವದ ಕಾರ್ಯಕ್ರಮಗಳಿಗೆ ಕ್ವಿಜ್‌ ಮೂಲಕ ಚಾಲನೆ ನೀಡಿದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಏಪ್ರಿಲ್ 18ರೊಳಗೆ ಸಂಸ್ಥೆಯ ವೆಬ್‌ಸೈಟ್‌ www.siddaganga.com ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT