ದಾವಣಗೆರೆ: ‘ಧರ್ಮ, ಜಾತಿ ಹೆಸರಿನಲ್ಲಿ ಸಮಾಜ ಒಡೆಯುವ ಮೇಲ್ವರ್ಗದ ಕೋಮುವಾದಿ ಪಕ್ಷ ಬಿಜೆಪಿ. ಸಮಾಜದಲ್ಲಿ ಹುಳಿ ಹಿಂಡುವ ಈ ಪಕ್ಷವನ್ನು ಉಪಚುನಾವಣೆಯಲ್ಲಿ ಬೆಂಬಲಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ದಕ್ಷಿಣ ವಿಧಾನಸಭಾ ಕ್ಷೇತ್ರದ ಆರ್ಎಂಸಿ ಸಮೀಪದ ಗಣೇಶ ಹೋಟೆಲ್ ವೃತ್ತ, ಹೊಂಡದ ವೃತ್ತದಲ್ಲಿ ಚುನಾವಣಾ ಬಹಿರಂಗ ಸಭೆಗಳಲ್ಲಿ ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿದರು.

‘ಹಿಂದೂಗಳಲ್ಲಿ ಜಾತಿ ಸೃಷ್ಟಿಸಿ ಸಮಾಜವನ್ನು ಹಾಳು ಮಾಡಿದ್ದಾರೆ. ಬಡವರಿಗೆ ಶಕ್ತಿ ಕೊಡುವ ಪ್ರಯತ್ನವನ್ನು ಬಿಜೆಪಿ ನಾಯಕರು ಎಂದಿಗೂ ಮಾಡಿಲ್ಲ. ಬಿಜೆಪಿಯವರು ಮಹಿಳೆಯರು, ದಲಿತರು, ಹಿಂದುಳಿದವರ ವಿರೋಧಿಗಳು’ ಎಂದು ಕಿಡಿಕಾರಿದರು.

‘ಕಾಂಗ್ರೆಸ್ ಮಾತ್ರ ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಪಕ್ಷ. ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡಲು ಶ್ರಮಿಸುತ್ತಿದ್ದೇವೆ. ಎಲ್ಲ ಸಮುದಾಯದ ಬಡವರ ಏಳಿಗೆ ಬಯಸುತ್ತೇವೆ. ದುರ್ಬಲರು, ಬಡವರು, ದಲಿತರು, ಅಲ್ಪಸಂಖ್ಯಾತ, ಹಿಂದುಳಿದವರು, ಮಹಿಳೆಯರು ಹಾಗೂ ಕಾರ್ಮಿಕರಿಗೆ ಶಕ್ತಿ ತುಂಬ ಬೇಕು ಎಂಬುದು ಕಾಂಗ್ರೆಸ್ ಆಶಯ’ ಎಂದು ಹೇಳಿದರು.

ದರ್ಗಾ, ದೇಗುಲಕ್ಕೆ ಭೇಟಿ:

ಪ್ರಚಾರಕ್ಕೆ ಆಗಮಿಸುವುದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ದೇಗುಲ ಹಾಗೂ ದರ್ಗಾಗಳಿಗೆ ಭೇಟಿ ನೀಡಿದರು.

ನಗರ ದೇವತೆ ದುರ್ಗಾಂಬಿಕಾದೇವಿ ದೇಗುಲಕ್ಕೆ ಹಾಗೂ ಹಳೆಪೇಟೆಯ ವೀರಭದ್ರಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಶಿವಾಜಿನಗರದ ಹಜರತ್ ಖಡಕ್ ಷಾವಲಿ ದರ್ಗಾಗೆ ತೆರಳಿ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಶಾಸಕಿ ಲತಾ ಮಲ್ಲಿಕಾರ್ಜುನ್, ಮಾಜಿ ಸಚಿವ ವಿನಯ್ಕುಮಾರ್ ಸೊರಕೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.