ದಾವಣಗೆರೆ: ‘ಮುಖ್ಯಮಂತ್ರಿ ಸಿದ್ದರಾಮಯ್ಯ 2028ರವರೆಗೆ ಮುಖ್ಯಮಂತ್ರಿ ಆಗಿರುತ್ತಾರೆ. ಈ ಅವಧಿಯನ್ನು ಅವರು ಪೂರ್ಣಗೊಳಿಸಲಿದ್ದಾರೆ’ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

‘2028ರವರೆಗೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಬದಲಾವಣೆ ಮಾಡಬೇಕಾದರೆ ರಾಜ್ಯದಲ್ಲಿ ಯಾರಿಂದಲೂ ಸಾಧ್ಯವಿಲ್ಲ. ಈ ಕುರಿತು ತೀರ್ಮಾನ ಕೈಗೊಳ್ಳುವ ಶಕ್ತಿ ಹೈಕಮಾಂಡ್ಗೆ ಮಾತ್ರ ಇದೆ. 50 ವರ್ಷ ರಾಜಕಾರಣದಲ್ಲಿ ಇರುವ ಸಿದ್ದರಾಮಯ್ಯ ನಿಜಕ್ಕೂ ಜನನಾಯಕ’ ಎಂದು ಜಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸಿದ್ದರಾಮಯ್ಯ ಅವರು 5 ವರ್ಷದ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಅರ್ಧಕ್ಕೆ ಕೆಳಗೆ ಇಳಿಯುತ್ತಾರೆ ಎಂಬುದು ಊಹಾಪೋಹ. ರಾಜ್ಯದ ಅತಿ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದು ಹಿಂದುಳಿದ ವರ್ಗಗಳಿಗೆ ಹೆಮ್ಮೆಯ ಸಂಗತಿ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.

'ಟಿಕೆಟ್: ಮುಸ್ಲಿಮರ ಬೇಡಿಕೆ'

'ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೋರಿ ಮುಸ್ಲಿಂ ಮುಖಂಡರು ನನ್ನನ್ನು ಸಂಪರ್ಕಿಸಿದ್ದಾರೆ' ಎಂದು ವಸತಿ ಸಚಿವ ಜಮೀರ್ ಅಹಮದ್ ತಿಳಿಸಿದರು.

'ಇದು ನನ್ನ ಕೊನೆಯ ಚುನಾವಣೆ. ಮುಂಬರುವ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲಾಗುವುದು' ಎಂಬುದಾಗಿ ದಿವಂಗತ ಶಾಮನೂರು ಶಿವಶಂಕರಪ್ಪ ಅವರು 2023ರಲ್ಲಿ ನೀಡಿದ ಆಶ್ವಾಸನೆಯನ್ನು ಅನೇಕ ಮುಖಂಡರು ಗಮನಕ್ಕೆ ತಂದಿದ್ದಾರೆ. ಇದರ ವಿಡಿಯೊ ಕ್ಲಿಪ್ ಕೂಡ ತೋರಿಸಿದ್ದಾರೆ. ಈ ಕುರಿತು ಪಕ್ಷ ತೀರ್ಮಾನ ಕೈಗೊಳ್ಳುತ್ತದೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.