ಭಾನುವಾರ, ಜುಲೈ 25, 2021
22 °C
8ನೇ ದಿನಕ್ಕೆ ಕಾಲಿಟ್ಟ ವೈದ್ಯ ವಿದ್ಯಾರ್ಥಿಗಳ ಮುಷ್ಕರ

ದಾವಣಗೆರೆ | ವೈದ್ಯ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಚಳವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಬಾಕಿ ಇರುವ 16 ತಿಂಗಳ ಶಿಷ್ಯವೇತನಕ್ಕೆ ಆಗ್ರಹಿಸಿ ಇಲ್ಲಿನ ಜೆ.ಜೆ.ಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಸಹಿ ಸಂಗ್ರಹ ಚಳವಳಿ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಸೋಮವಾರ ಬೆಳಿಗ್ಗೆಯೇ ಜಯದೇವ ವೃತ್ತದಲ್ಲಿ ಜಮಾವಣೆಗೊಂಡು ವೈದ್ಯ ವಿದ್ಯಾರ್ಥಿಗಳು ಬ್ಯಾನರ್‌ನಲ್ಲಿ ಸಹಿ ಹಾಕಿದರು.

ಸರ್ಕಾರ ಹಾಗೂ ಅಡಳಿತ ಮಂಡಳಿ ನಡುವೆ ನಡುವಿನ ತಿಕ್ಕಾಟದಲ್ಲಿ ವಿದ್ಯಾರ್ಥಿಗಳು ನೋವು ಅನುಭವಿಸುತ್ತಿದ್ದು, 8 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ನಡೆಸಿದರೂ ವಿದ್ಯಾರ್ಥಿಗಳು ಪಟ್ಟು ಸಡಿಲಿಸಿಲ್ಲ.

‘ಭಾನುವಾರ ಪತ್ರ ಚಳವಳಿ ನಡೆಸಿದ್ದು, ಆ ಪತ್ರಗಳನ್ನು ಪೋಸ್ಟ್ ಮಾಡಿದ್ದೇವೆ. ಜನರಿಂದ ಭಿಕ್ಷಾಟನೆ ಮೂಲಕ ಸಂಗ್ರಹಿಸಿದ ಹಣದಲ್ಲಿ ಸ್ಯಾನಿಟೈಸರ್, ಮಾಸ್ಕ್ ಖರೀದಿಸಿದ್ದು, ಮಂಗಳವಾರ ಪ್ರತಿಭಟನೆ ವೇಳೆ ಅಲ್ಲಿನ ಜನರಿಗೆ ವಿತರಿಸಿ ಕೋವಿಡ್‌–19 ಬಗ್ಗೆ ಜಾಗೃತಿ ಮೂಡಿಸಲಾಗುವುದು. ಅಲ್ಲದೇ ಪ್ರಹಸನ ಮಾಡುವ ಪ್ರತಿಭಟನೆ ನಡೆಸಲಾಗುವುದು’ ಎಂದು ಡಾ.ಹರೀಶ್ ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು