ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಳ ಕಲ್ಯಾಣ ಕರ್ನಾಟಕ ಉತ್ಸವ

Last Updated 18 ಸೆಪ್ಟೆಂಬರ್ 2020, 5:41 IST
ಅಕ್ಷರ ಗಾತ್ರ

ಹರಪನಹಳ್ಳಿ: ಪಟ್ಟಣದ ಮಿನಿವಿಧಾನ ಸೌಧ ಸೇರಿ ತಾಲ್ಲೂಕಿನ ವಿವಿಧೆಡೆ ಬುಧವಾರ ಕಲ್ಯಾಣ ಕರ್ನಾಟಕ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು.

ತಾಲ್ಲೂಕು ಕಚೇರಿಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಉಪ ವಿಭಾಗಾಧಿಕಾರಿ ವಿ.ಕೆ. ಪ್ರಸನ್ನಕುಮಾರ ಧ್ವಜಾರೋಹಣ ನೆರವೇರಿಸಿದರು.

‘ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371 (ಜೆ) ಸೌಲಭ್ಯಕಲ್ಪಿಸಿದ ಪರಿಣಾಮ ಉದ್ಯೋಗ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮೀಸಲಾತಿ ಲಭಿಸಿದೆ. ‌2013ರ ನಂತರ ಕಲ್ಯಾಣ ಕರ್ನಾಟಕ ಭಾಗದ ಜನರು ಉನ್ನತ ಹುದ್ದೆ ಪಡೆದಿದ್ದಾರೆ. 10 ವರ್ಷಗಳಿಂದ ಈಚೆಗೆ ಈ ಭಾಗವು ಅಭಿವೃದ್ಧಿಯಾಗುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ಇನ್ನೂ ಅಭಿವೃದ್ಧಿ ಸಾಧಿಸುತ್ತಿದೆ’ ಎಂದರು.

ತಹಶೀಲ್ದಾರ್‌ ಅನಿಲ್ ಕುಮಾರ, ಕಂದಾಯ ಅಧಿಕಾರಿಗಳು ಇದ್ದರು.

ಪಟ್ಟಣದ ಕಟ್ಟಿಸೇತುರಾಮಚಾರ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯ ಟಿ.ಎಂ. ರಾಜಶೇಖರ ಧ್ವಜಾರೋಹಣ ನೆರವೇರಿಸಿದರು. ಬಾಲಕೀಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಲಿಂಗಾನಂದ ಧ್ವಜಾರೋಹಣ ಮಾಡಿದರು. ಸರ್ಕಾರಿ ಪ್ರೌಢಶಾಲೆ, ಶಿಕ್ಷಣ ಇಲಾಖೆ, ಪುರಸಭೆ, ತಾಲ್ಲೂಕು ಪಂಚಾಯಿತಿ, ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಸೇರಿ ತಾಲ್ಲೂಕಿನ ಸರ್ಕಾರಿ ಕಚೇರಿಗಳು, ಶಾಲೆಗಳಲ್ಲಿ ಧ್ವಜಾರೋಹಣ ನೆರವೇರಿಸಿ ಉತ್ಸವ ಆಚರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT