ಹಾವು ಕಚ್ಚಿ ಬಾಲಕ ಸಾವು
ಮಲೇಬೆನ್ನೂರು: ಸಮೀಪದ ಇಂಗಳಗುಂದಿ ಗ್ರಾಮದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ.
ಕೊಪ್ಪದ ಮಹಾದೇವಪ್ಪ ಅವರ ಪುತ್ರ ಸಂಜೀವ (16) ಮೃತಪಟ್ಟ ಬಾಲಕ.
ಜಮೀನಿನಲ್ಲಿ ಹಸುವಿಗೆ ಹುಲ್ಲು ಸಂಗ್ರಹಿಸಲು ಹೋಗಿದ್ದ ವೇಳೆ ಹಾವು ಕಚ್ಚಿದೆ.
ಚಿಕಿತ್ಸೆಗಾಗಿ ಹರಿಹರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಂದ ವೈದ್ಯರ ಸಲಹೆಯ ಮೇರೆಗೆ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಬಂದಿದ್ದಾರೆ. ಕೋವಿಡ್ ಆಸ್ಪತ್ರೆಯಾಗಿದ್ದರಿಂದ ಬಾಪೂಜಿ ಆಸ್ಪತ್ರೆಗೆ ಕರೆದೊಯ್ಯವಂತೆ ತಿಳಿಸಿದ್ದಾರೆ. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ.
ಹುಣಸೆಕಟ್ಟೆ: ವ್ಯಕ್ತಿ ಸಾವು
ದಾವಣಗೆರೆ: ತಾಲ್ಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಹೃದಯಾಘಾತದ ಶಂಕೆ ವ್ಯಕ್ತಪಡಿಸಲಾಗಿದೆ.
ಗ್ರಾಮದ ವಿಜಯಕುಮಾರ(55) ಮೃತಪಟ್ಟವರು. 5 ವರ್ಷಗಳ ತಲೆಗೆ ಪೆಟ್ಟು ಬಿದ್ದಿದ್ದು, ಬುದ್ಧಿಹೀನರಾಗಿ ವರ್ತಿಸುತ್ತಿದ್ದರು. ಜಮೀನಿಗೆ ಹೋಗಿ ಬರುತ್ತೇವೆ ಎಂದು ಎರಡು ದಿನಗಳ ಹಿಂದೆ ಹೋಗಿದ್ದು, ಮನೆಗೆ ಬಂದಿರಲಿಲ್ಲ. ಜಮೀನಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.