ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ | ಶಿಕ್ಷಕರಿಗೆ ಸಾಮಾಜಿಕ ಜವಾಬ್ದಾರಿ ಮುಖ್ಯ

Published 1 ಫೆಬ್ರುವರಿ 2024, 6:42 IST
Last Updated 1 ಫೆಬ್ರುವರಿ 2024, 6:42 IST
ಅಕ್ಷರ ಗಾತ್ರ

ದಾವಣಗೆರೆ: ಶಿಕ್ಷಕರೆಂದರೆ ಕೇವಲ ಓದು, ಬರಹ, ಲೆಕ್ಕಾಚಾರಗಳಿಗಷ್ಟೇ ಅಲ್ಲ. ಸಾಮಾಜಿಕ ಜವಾಬ್ದಾರಿಯೂ ಮುಖ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೊಟ್ರೇಶ್ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕದಿಂದ ಇಲ್ಲಿನ ಗುರುಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಹಾಗೂ ಫಾತಿಮಾ ಶೇಖ್ ಅವರ ಜಯಂತ್ಯುತ್ಸವ, ಶೈಕ್ಷಣಿಕ ಕಾರ್ಯಾಗಾರ ಮತ್ತು ಜಿಲ್ಲಾ ಮಟ್ಟದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಇಂದು 8ರಿಂದ 9ನೇ ತರಗತಿ ವಿದ್ಯಾರ್ಥಿಗಳು ಬಾಲ್ಯವಿವಾಹಕ್ಕೆ ಒಳಗಾಗಿರುವ ಸಾಧ್ಯತೆ ಇದ್ದು, ಒಂದು ವಾರ ಇಲ್ಲವೇ 10 ದಿನಗಳ ಕಾಲ ಶಾಲೆಗೆ ಗೈರು ಹಾಜರಾಗಿದ್ದರೆ. ಅಂತಹ ವಿದ್ಯಾರ್ಥಿನಿಯರನ್ನು ಗಮನಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆ ತರಬೇಕು, ಬಾಲ್ಯ ವಿವಾಹ, ಪೋಕ್ಸೊ ಪ್ರಕರಣಗಳನ್ನು ತಡೆಗಟ್ಟಬೇಕು. ಶಿಕ್ಷಕರ ವೃತ್ತಿಯಿಂದ ಆಚೆಗೆ ಸಾಮಾಜಿಕ ಜವಾಬ್ದಾರಿಗಳು, ಹೊಣೆಗಾರಿಕೆಗಳು ಇದ್ದು, ಸಮಾಜವನ್ನು ತಿದ್ದಿ ತೀಡುವ ಕೆಲಸ ಮಾಡದೇ ಇದ್ದರೆ ಶಿಕ್ಷಣ ಪರಿಪೂರ್ಣವಾಗುವುದಿಲ್ಲ’ ಎಂದು ಹೇಳಿದರು.

‘ಮಹಾತ್ಮಗಾಂಧಿ, ಅಂಬೇಡ್ಕರ್ ಸೇರಿದಂತೆ ಮಹಾನ್ ವ್ಯಕ್ತಿಗಳ ಜಯಂತಿಗಳನ್ನು ಆಚರಿಸುವುದರ ಜೊತೆಗೆ ಅವರ ತತ್ವ, ಆದರ್ಶಗಳನ್ನು ಮಕ್ಕಳಿಗೆ ತಿಳಿಸುವ ಮೂಲಕ ಅವರನ್ನು ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಬೇಕು. ಶಿಕ್ಷಕರ ಮಾರ್ಗದರ್ಶನಗಳು ಮಾನವ ಸಂಪನ್ಮೂಲ ನಿರ್ಮಾಣಕ್ಕೆ ಸಹಕಾರಿ. ಶಿಕ್ಷಕರಿಗೆ ಅನೇಕ ಸವಾಲುಗಳು ಇದ್ದು, ಪ್ರತಿ ದಿವಸ ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಮೂಲಕ ಅಪ್‌ಡೇಟ್ ಆಗಬೇಕು. ಶಿಕ್ಷಕರು ಒಂದು ತಾಸು ಹೆಚ್ಚು ಕೆಲಸ ಮಾಡಬೇಕು’ ಎಂದು ಹೇಳಿದರು.

ಎವಿಕೆ ಕಾಲೇಜಿನ ಉಪನ್ಯಾಸಕಿ ಗೀತಾ ಬಸವರಾಜ್ ‘ಭಾರತದ ಹೆಣ್ಣು ಮಕ್ಕಳ ಶಿಕ್ಷಣದ ಸಬಲೀಕರಣದಲ್ಲಿ ಸಾವಿತ್ರಿಬಾಯಿ ಫುಲೆ ಹಾಗೂ ಫಾತಿಮಾ ಶೇಖ್ ಅವರ ಪಾತ್ರ ವಿಷಯ ಕುರಿತು ಉಪನ್ಯಾಸ ನೀಡಿದರು.

ಶಿಕ್ಷಕಿಯರಿಗೆ ಸಾವಿತ್ರಿ ಬಾಯಿಫುಲೆ, ಶಿಕ್ಷಕರಿಗೆ ಜ್ಯೋತಿರಾವ್ ಫುಲೆ ಹೆಸರಿನಲ್ಲಿ 56 ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಯಟ್ ಉಪನಿರ್ದೇಶಕಿ ಗೀತಾ ಎಸ್ ಅಧ್ಯಕ್ಷತೆ ವಹಿಸಿದ್ದರು. ಬಿಇಒಗಳಾದ ಶೇರ್ ಅಲಿ, ಪುಷ್ಪಲತಾ, ಹನುಮಂತಪ್ಪ, ಉಪನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿ ‌ರಾಜಶೇಖರ್, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಕಲ್ಪನಾ ರವೀಂದ್ರನಾಥ, ಪ್ರಧಾನ ಕಾರ್ಯದರ್ಶಿ ಮಂಗಳ ಎಚ್., ಖಜಾಂಚಿ ಪದ್ಮ ಸಿ. ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೀರೇಶ್ ಒಡೆಯನಪುರ, ಕಾರ್ಯದರ್ಶಿ ಗುರುಮೂರ್ತಿ, ರಾಜ್ಯ ಪರಿಷತ್ ಸದಸ್ಯೆ ಮಂಜುಳಾ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮುಬಾರಕ್, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ  ರಾಮಣ್ಣವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಗದೀಶ್, ಉಪಾಧ್ಯಕ್ಷರಾದ ಮಾಲಾ, ನಾಗರತ್ನ, ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಘಟಕದ ವೆಂಕಟೇಶ್, ಸಂಘದ ತಾಲ್ಲೂಕು ಅಧ್ಯಕ್ಷರಾದ ಸರೋಜಾ ಡಿ. ಷಹಜಾನ್, ಪ್ರೇಮಲತಾ, ಭಾಗ್ಯಲಕ್ಷ್ಮಿ, ಪುಷ್ಪಲತಾ ಇತರರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಭಾಗವಹಿಸಿದ್ದ ಶಿಕ್ಷಕಿಯರು
ಸಮಾರಂಭದಲ್ಲಿ ಭಾಗವಹಿಸಿದ್ದ ಶಿಕ್ಷಕಿಯರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT