ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರ ಪ್ರತಿಭಟನೆ

Last Updated 29 ಸೆಪ್ಟೆಂಬರ್ 2020, 16:16 IST
ಅಕ್ಷರ ಗಾತ್ರ

ದಾವಣಗೆರೆ: ಪೌರಕಾರ್ಮಿಕರ ಮಾದರಿಯಲ್ಲಿಯೇ ನೇರ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ದಾವಣಗೆರೆ ಮಹಾನಗರ ಪಾಲಿಕೆ ಹೊರಗುತ್ತಿಗೆ ನೌಕರರು ಹಾಗೂ ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಮಂಗಳವಾರ ಪ‍್ರತಿಭಟನೆ ನಡೆಯಿತು.

ಈ ಎರಡು ವಿಭಾಗಗಳಿಂದರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯನಿರ್ವಹಿಸುತ್ತಿದ್ದು, ನಗರಗಳ ಸ್ವಚ್ಛತೆ, ನಿರ್ವಹಣೆಯಲ್ಲಿಹೊರಗುತ್ತಿಗೆ ವಾಹನ ಚಾಲಕರು, ವಾಟರ್‌ ಮನ್ ಹಾಗೂ ಯುಜಿಡಿ ಹೆಲ್ಪರ್‌ಗಳ ಪಾತ್ರ ದೊಡ್ಡದು. ಇವರು ಯಾವುದೇ ಸೇವಾ ಭದ್ರತೆ ಇಲ್ಲದೇ ಕನಿಷ್ಠ ವೇತನಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದು, ಪೌರಕಾರ್ಮಿಕರ ಮಾದರಿಯಲ್ಲಿಯೇ ನೇರ ವೇತನಕ್ಕೆ ಒಳಪಡಿಸುವ ಅಗತ್ಯವಿದೆ’ ಎಂದು ಪ್ರತಿಭಟನಕಾರರು ಹೇಳಿದರು.

ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಂ. ವೀರೇಶ್, ಕಾರ್ಯದರ್ಶಿ ಟಿ. ಕಿರಣ್‌ಕುಮಾರ್, ಖಜಾಂಚಿ ಎಂ.ಆರ್.ದುಗ್ಗೇಶ್‌, ನಿರ್ದೇಶಕ ಎಚ್‌.ಎಂ. ಪ್ರಭಾಕರ್, ಸುರೇಶ್ ಪ್ರತಿಭಟನೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT