ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ

Published 8 ಜೂನ್ 2024, 7:20 IST
Last Updated 8 ಜೂನ್ 2024, 7:20 IST
ಅಕ್ಷರ ಗಾತ್ರ

ದಾವಣಗೆರೆ: ಮುಂಗಾರು ಹಂಗಾಮು ಆರಂಭವಾಗಿದ್ದು ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಾಗದಂತೆ ಕೃಷಿ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚಿಸಿದರು.

ನಗರದ ಕೃಷಿ ಇಲಾಖೆಯ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಗ್ರಾಣದಲ್ಲಿ ಬಿತ್ತನೆ ಬೀಜದ ದಾಸ್ತಾನು ಪರಿಶೀಲಿಸಿದ ಬಳಿಕ ಮಾತನಾಡಿ, ‘ರೈತರಿಗೆ ಬೀಜ ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ’ ಎಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದರು.

‘ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಮಾಡಲಾದ ಮೆಕ್ಕೆಜೋಳದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಿ ಸ್ಥಳದಲ್ಲಿದ್ದ ರೈತರೊಂದಿಗೆ ಕೃಷಿಯ ಬಗ್ಗೆ  ಹಾಗೂ ಕುಂದು ಕೊರತೆ ವಿಚಾರಿಸಿದರು. ಬಳಿಕ ಕೇಂದ್ರ ಉಗ್ರಾಣ ನಿಗಮಕ್ಕೆ ಭೇಟಿ ನೀಡಿ ಗೊಬ್ಬರದ ದಾಸ್ತಾನನ್ನು ಪರಿಶೀಲಿಸಿ ಕೃಷಿ ಅಧಿಕಾರಗಳೊಂದಿಗೆ ಚರ್ಚಿಸಿದರು. ರೈತರಿಗೆ ಸಮರ್ಪಕವಾಗಿ ಬೀಜ ಮತ್ತು ಗೊಬ್ಬರವನ್ನು ವಿತರಿಸುವಂತೆ ಹಾಗೂ ರೈತರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಜನಪರವಾಗಿ ಹಾಗೂ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT