ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಗ ಜಲಪಾತಕ್ಕೆ ಆ.1ರಿಂದ ನಿತ್ಯ ವಿಶೇಷ ಬಸ್

Last Updated 26 ಜುಲೈ 2021, 16:26 IST
ಅಕ್ಷರ ಗಾತ್ರ

ದಾವಣಗೆರೆ: ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಸಾರ್ವಜನಿಕರು ವೀಕ್ಷಿಸಲು ದಾವಣಗೆರೆ ಮತ್ತು ಹರಿಹರದಿಂದ ಜೋಗ್‍ಫಾಲ್ಸ್‌ಗೆ ರಾಜಹಂಸ ಸಾರಿಗೆ ವಿಶೇಷ ಪ್ಯಾಕೇಜ್ ಸೇವೆ ಆಗಸ್ಟ್‌ 1ರಿಂದ ವಾರದ ಎಲ್ಲಾ ದಿನಗಳಲ್ಲಿ ಇರಲಿದೆ.

ಭಾನುವಾರ ಮಾತ್ರ ಈ ಸೇವೆ ಪ್ರಾರಂಭಿಸಲಾಗಿತ್ತು. ಈ ಪ್ಯಾಕೇಜ್ ಪ್ರಯಾಣಕ್ಕೆ ಸಾರ್ವಜನಿಕ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.

ದಾವಣಗೆರೆಯಿಂದ ಬೆಳಿಗ್ಗೆ 7 ಕ್ಕೆ ಹೊರಟು, ಹರಿಹರ 7.30, ಶಿರಸಿಗೆ ಬೆ. 10.30ಕ್ಕೆ ತಲುಪುತ್ತದೆ. ಮಧ್ಯಾಹ್ನ 12ಕ್ಕೆ ಶಿರಸಿಯಿಂದ ಹೊರಟು ಮಧ್ಯಾಹ್ನ 1.30ಕ್ಕೆ ಜೋಗವನ್ನು ತಲುಪುತ್ತದೆ. ಸಂಜೆ 4.30ಕ್ಕೆ ಜೋಗದಿಂದ ಹೊರಟು ರಾತ್ರಿ 8ಕ್ಕೆ ದಾವಣಗೆರೆ ತಲುಪಲಿದೆ. ಪ್ರಯಾಣ ದರ ₹ 500, ಮಕ್ಕಳಿಗೆ ₹ 375 ನಿಗದಿಪಡಿಸಲಾಗಿದೆ. ಹರಿಹರದಿಂದ ಹೊರಡುವ ಪ್ರಯಾಣಿಕರಿಗೆ ದರ ₹ 475, ಮಕ್ಕಳಿಗೆ ₹ 350 ಇರಲಿದೆ.

ಮುಂಗಡ ಬುಕ್ಕಿಂಗ್ ಕೌಂಟರ್‌ಗಳಲ್ಲಿ ಬುಕ್ಕಿಂಗ್www.ksrtc.in ಮಾಡಲು ಸೌಕರ್ಯ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT