ದಾವಣಗೆರೆ:ಜಿಲ್ಲೆಯ ಜಗಳೂರು ತಾಲ್ಲೂಕು ಬಳಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಕಾನನಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದ್ದು, ರಸ್ತೆ ವಿಭಜಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಜನವರಿ 14 ರಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕರಡಕಲ್ ಗ್ರಾಮದ ಮಲ್ಲನಗೌಡ (22), ಸಂಜೀವ್ (20), ಸಂತೋಷ್ (21). ಜೈಭೀಮ್ (18), ವಿಜಯಪುರ ಜಿಲ್ಲೆಯ ತಾಳಿಕೋಟೆಯ ರಘು (23), ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಸಿದ್ದೇಶ್ (20), ವೇದಮೂರ್ತಿ ಹಾಗೂ ಈಚಲಬೊಮ್ಮನಹಳ್ಳಿಯ ಆನಂದ್ (18) ಮೃತರು.

ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದ ಯುವಕರು ಸಂಕ್ರಾಂತಿ ಹಬ್ಬ ಹಾಗೂ ವಾರಾಂತ್ಯ ಕರ್ಫ್ಯೂ ಇದ್ದುದರಿಂದ ಹಂಪಿ ನೋಡಲು ಹೊರಡುತ್ತಿದ್ದರು. ನಿದ್ರೆಯ ಮಂಪರಿನಲ್ಲಿದ್ದ ಚಾಲಕ ರಸ್ತೆಯ ಪಕ್ಕದಲ್ಲಿದ್ದ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದು ಬಂದಿದೆ.

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.