ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೂಕ್ತ ಅಭ್ಯರ್ಥಿಯ ಅಗತ್ಯವಿದೆ. ಪಕ್ಷವು ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಒಮ್ಮತದ ತೀರ್ಮಾನ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.

‘ಚುನಾವಣೆಗೆ ಸ್ಪರ್ಧಿಸುವ ಅಪೇಕ್ಷೆಯನ್ನು ಅನೇಕರು ಹೊಂದಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ನಡೆಯುತ್ತಿದೆ. ಶೀಘ್ರದಲ್ಲೇ ಪಕ್ಷದ ಸಭೆ ಸೇರಿ ಕಾರ್ಯಕರ್ತರ ಅಭಿಪ್ರಾಯ ಪಡೆಯಲಾಗುತ್ತದೆ. ಅಭ್ಯರ್ಥಿ ಆಯ್ಕೆಯ ನಿರ್ಧಾರವನ್ನು ಹೈಕಮಾಂಡ್ಗೆ ಬಿಡಲಾಗುತ್ತದೆ’ ಎಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಅನೇಕ ಬಡಾವಣೆಗಳನ್ನು 2001–03ರ ಅವಧಿಯಲ್ಲಿ ಅಭಿವೃದ್ದಿಪಡಿಸಲಾಗಿದೆ. ಕಾಂಕ್ರಿಟ್ ರಸ್ತೆ, ಕುಡಿಯುವ ನೀರಿನ ಸೌಲಭ್ಯ ಸೇರಿ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮಳೆನೀರು ಚರಂಡಿಗಳು ಸುವ್ಯವಸ್ಥಿತವಾಗಿ ನಿರ್ಮಾಣಗೊಂಡಿವೆ. ಇದರಿಂದ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುವ ಸಮಸ್ಯೆಗೆ ಪರಿಹಾರ ಸಿಕ್ಕಿದೆ’ ಎಂದು ಪ್ರತಿಕ್ರಿಯಿಸಿದರು.

‘ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ನಲ್ಲಿ ₹ 100 ಕೋಟಿ ಅನುದಾನ ನೀಡಲಾಗಿದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಉತ್ತಮ ಬಜೆಟ್ ನೀಡಿದ್ದಾರೆ. ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ಸಿಕ್ಕಿದೆ. ಇದರಲ್ಲಿ ರಾಜಕೀಯ ಹುಡುವುದು ಸರಿಯಲ್ಲ’ ಎಂದರು.

ಒಳಾಂಗಣ ಕ್ರೀಡಾಂಗಣ ಉದ್ಘಾಟನೆ

ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿಸಿಎಂ ಟೌನ್ಶಿಪ್ನಲ್ಲಿನ ಅನಿಲ್ ಕುಂಬ್ಳೆ ಮೈದಾನದ ಒಳಾಂಗಣ ಕ್ರೀಡಾಂಗಣ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭಾನುವಾರ ಉದ್ಘಾಟಿಸಿದರು. ‘ಡಿಸಿಎಂ ಟೌನ್ಶಿಪ್ಗೆ ಒಳಾಂಗಣ ಕ್ರೀಡಾಂಗಣದ ಅವಶ್ಯಕತೆ ಇತ್ತು. ಅನುದಾನದ ಕೊರತೆಯಿಂದ ಕ್ರೀಡಾಂಗಣ ನಿರ್ಮಾಣ ಸಾಧ್ಯವಾಗಿರಲಿಲ್ಲ. ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ಕ್ರೀಡಾಂಗಣ ನಿರ್ಮಾಣವಾಗಿದೆ. ಗ್ಯಾಲರಿ ಕಬಡ್ಡಿ ಕೇರಂ ಹಾಗೂ ಇತರ ಕ್ರೀಡೆಗಳನ್ನು ಆಯೋಜಿಸುವ ವ್ಯವಸ್ಥೆ ಉತ್ತಮವಾಗಿದೆ’ ಎಂದರು. ‘ಈ ಬಡಾವಣೆಯಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗಿತ್ತು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮಳೆ ನೀರು ಸರಾಗವಾಗಿ ಹರಿಯುವಂತ ವ್ಯವಸ್ಥೆ ಮಾಡಿದ್ದರಿಂದ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಆವರಗೆರೆ ಬಳಿ ಕೆಳಸೇತುವೆ ನಿರ್ಮಾಣ ಮಾಡಿದರೆ ಸಂಚಾರ ಸಮಸ್ಯೆ ನಿವಾರಣೆ ಆಗಲಿದೆ’ ಎಂದು ಹೇಳಿದರು. ‘ಉದ್ಯಾನಗಳ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ₹ 10 ಕೋಟಿ ಮೀಸಲಿಡಲಾಗಿದೆ. ಡಿಸಿಎಂ ಟೌನ್ಶಿಪ್ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನೂತನ ಅಂಗನವಾಡಿ ಕೇಂದ್ರ ಹಾಗೂ ರಸ್ತೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು. ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಪಾಲಿಕೆ ಆಯುಕ್ತ ಮಹಾಂತೇಶ್ ಪಾಲಿಕೆ ಮಾಜಿ ಸದಸ್ಯರಾದ ಎ.ನಾಗರಾಜ್ ಕೆ.ಜಿ ಶಿವಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.