ದಾವಣಗೆರೆ: 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಗುರುವಾರ ಫಲಿತಾಂಶ ಪ್ರಕಟವಾಗಿದ್ದು, ಚನ್ನಗಿರಿ ತಾಲ್ಲೂಕಿನ ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢ ಶಾಲೆಯ ವಿದ್ಯಾರ್ಥಿ ಭರತ್ 625ಕ್ಕೆ 625 ಅಂಕ ಪಡೆದು ಅಗ್ರ ಸ್ಥಾನ ಪಡೆದಿದ್ದಾರೆ. ಭರತ್, ರಾಜ್ಯದ ಇತರ ಜಿಲ್ಲೆಗಳ ಐವರು ವಿದ್ಯಾರ್ಥಿಗಳ ಜೊತೆ ಅಗ್ರ ಸ್ಥಾನವನ್ನು ಹಂಚಿಕೊಂಡಿದ್ದಾರೆ.

ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ಭರತ್ ಗ್ರಾಮಕ್ಕೆ ಸಮೀಪದ ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಗೆ ನಿತ್ಯ ಹೋಗಿ ಬರುತ್ತಿದ್ದರು. ಇವರ ತಂದೆ ಗಿರೀಶ್–ತಾಯಿ ಶಿಲ್ಪಾ.

ತಂದೆಗೆ ಸ್ವಲ್ಪ ಜಮೀನು ಇದ್ದು, ಜೀವನೋಪಾಯಕ್ಕೆ ಗುತ್ತಿಗೆ ಕೆಲಸ ಮಾಡುತ್ತಿದ್ದಾರೆ. ಕಷ್ಟದಲ್ಲಿಯೇ ಮಗನನ್ನು ಓದಿಸಿದ್ದಾರೆ. ಪೋಷಕರ ನಿರೀಕ್ಷೆಗೂ ಮೀರಿ ಭರತ್ ಇಡೀ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿರುವುದು ಹೆಮ್ಮೆ ತಂದಿದೆ ಎಂದು ಶಾಲೆಯ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದರು.

‘ಭರತ್ 1ನೇ ತರಗತಿಯಿಂದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಓದಿದ್ದು, ಎಸ್ಎಸ್ಎಲ್ಸಿಯಲ್ಲಿ ರಾಜ್ಯವೇ ಮೆಚ್ಚುವಂತೆ ಫಲಿತಾಂಶ ನೀಡಿದ್ಧಾನೆ. ಇದರಿಂದ ಖುಷಿಯಾಗಿದೆ’ ಎಂದು ಶಾಲೆಯ ಮುಖ್ಯಶಿಕ್ಷಕಿ ಲಕ್ಷ್ಮಿದೇವಿ ಎ.ಎನ್. ಹರ್ಷ ಸಂತಸ ವ್ಯಕ್ತಪಡಿಸಿದರು.

ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.