ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದಲ್ಲಿ ರಾಜ್ಯದ ಗ್ಯಾರಂಟಿ ಯೋಜನೆ ಜನಪ್ರಿಯ: ಶಾಸಕ ದೇವೇಂದ್ರಪ್ಪ

Published 27 ನವೆಂಬರ್ 2023, 15:57 IST
Last Updated 27 ನವೆಂಬರ್ 2023, 15:57 IST
ಅಕ್ಷರ ಗಾತ್ರ

ಜಗಳೂರು: ‘ಪಕ್ಕದ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಲೆ ವ್ಯಾಪಕವಾಗಿದ್ದು, ಈ ಬಾರಿ ಅಲ್ಲಿ ಕಾಂಗ್ರೆಸ್  ಅಧಿಕಾರ ಹಿಡಿಯಲಿದೆ’ ಎಂದು ತೆಲಂಗಾಣ ಚುನಾವಣೆಯ ಕಾಂಗ್ರೆಸ್ ವೀಕ್ಷಕ ರಾಗಿ ತೆರಳಿದ್ದ ಶಾಸಕ ಬಿ. ದೇವೇಂದ್ರಪ್ಪ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತೆಲಂಗಾಣದ ಮಂಚೆರಿಯಲ್ ಜಿಲ್ಲೆಯ ಚೆನ್ನೂರು ವಿಧಾನಸಭಾ ಕ್ಷೇತ್ರದ ವೀಕ್ಷಕನಾಗಿ ತೆರಳಿ ಪಕ್ಷದ ಸರಣಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದೇನೆ. ಕರ್ನಾಟಕದಲ್ಲಿ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ತೆಲಂಗಾಣದಲ್ಲೂ ಪ್ರತಿಧ್ವನಿಸುತ್ತಿವೆ’ ಎಂದರು.

ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಲವು ಸುತ್ತು ಪ್ರಚಾರ ಕಾರ್ಯಕೈಗೊಂಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ಕಾಂಗ್ರೆಸ್ ಮುಖಂಡರಾದ ಮಹಮ್ಮದ್ ಗೌಸ್, ಮಹಾಂತೇಶ್ ಗೂಳೇಶ್, ಅನೂಪ್ ರೆಡ್ಡಿ, ಗಿರೀಶ್, ಬಿಳಿಚೋಡು ಓಮಣ್ಣ, ತಮಲೇಹಳ್ಳಿ ತಿಮ್ಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT