ಸೋಮವಾರ, ಮಾರ್ಚ್ 8, 2021
22 °C

ಹೋರಾಟದ ಹಿನ್ನೆಲೆಯಲ್ಲಿ ತಂತಿಯ ಮೇಲಿನ ನಡಿಗೆ ಹೇಳಿಕೆ: ವಿಜಯೇಂದ್ರ ಸಮರ್ಥನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೋರಾಟದ ಹಿನ್ನೆಲೆಯಿಂದ ಬಂದವರು. ಆ ಹಿನ್ನೆಲೆಯಲ್ಲಿ ನನ್ನದು ತಂತಿ ಮೇಲೆ ನಡಿಗೆ. ಎಂದು ಹೇಳಿದ್ದಾರೆಯೇ ಹೊರತು ಬೇರೆ ದೃಷ್ಟಿಯಿಂದ ಅಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸುವ ಮುನ್ನ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಯಡಿಯೂರಪ್ಪ ಅಧಿಕಾರದಲ್ಲಿ ಇರಲಿ, ವಿಪಕ್ಷದಲ್ಲೇ ಇರಲಿ ಹೋರಾಟವನ್ನೇ ಮೈಗೂಡಿಸಿಕೊಂಡವರು. ಹಾಗಾಗಿ ಆ ಮಾತನ್ನು ಹೇಳಿದ್ದಾರೆ ಎಂದರು.

‘ವಿರೋಧ ಪಕ್ಷಗಳು ಟೀಕೆ ಮಾಡಿದಾಗ ಟಾಂಗ್ ಕೊಡುವುದು ಇದೆ. ಸರ್ಕಾರದ ವಿಷಯ, ಅಧಿಕಾರದ ಬಗ್ಗೆ ಮಾತನಾಡಲಿಕ್ಕೆ ಆಗುವುದಿಲ್ಲ. ಏಕೆಂದರೆ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಯಡಿಯೂರಪ್ಪ ಅವರು ಸಚಿವ ಸಂಪುಟದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಕೆಲ ಪದಾಧಿಕಾರಿಗಳ ನೇಮಕ ಕುರಿತು ಕೇಳಿದ ಪ್ರಶ್ನೆಗೆ, ‘ಯುವ ಮೋರ್ಚಾದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ‌ನಾನು ಈಗಲೂ ಪ್ರಧಾನ ಕಾರ್ಯದರ್ಶಿ ಆಗಿ ಕೆಲಸ ಮಾಡುತ್ತಿದ್ದೇನೆ’ ಎಂದು ಉತ್ತರಿಸಿದರು.

‘ನಾನು ಯಾವುದೇ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿಲ್ಲ. ಯಡಿಯೂರಪ್ಪ ಅವರು ಹುಟ್ಟು ಹೋರಾಟ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ್ದಾರೆ. ಅದರ ಅರಿವು ನನಗಿದೆ. ಆ ಸ್ಥಾನಕ್ಕೆ ಕಳಂಕ ತರುವ ಕೆಲಸ ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು